ADVERTISEMENT

ಇಂದು ಕಮಲಾ ಹ್ಯಾರಿಸ್ ಅಧಿಕಾರ ಸ್ವೀಕಾರ: ತಮಿಳುನಾಡಿನಲ್ಲಿ ಸಂಭ್ರಮ

ಏಜೆನ್ಸೀಸ್
Published 20 ಜನವರಿ 2021, 9:43 IST
Last Updated 20 ಜನವರಿ 2021, 9:43 IST
ಕಮಲಾ ಹ್ಯಾರಿಸ್
ಕಮಲಾ ಹ್ಯಾರಿಸ್   

ಚೆನ್ನೈ: ಅಮೆರಿಕದ ಉಪಾಧ್ಯಕ್ಷೆಯಾಗಿ ಕಮಲಾ ಹ್ಯಾರಿಸ್ ಅವರು ಇಂದು ಅಧಿಕಾರ ಸ್ವೀಕರಿಸಲಿರುವ ಹಿನ್ನೆಲೆಯಲ್ಲಿ ಅವರ ಪೂರ್ವಜರು ವಾಸವಿದ್ದ, ತಮಿಳುನಾಡಿನ ತುಳಸಿತೀರ್ಥಪುರಂ ಗ್ರಾಮದಲ್ಲಿ ಸಂಭ್ರಮ ಮನೆಮಾಡಿದೆ.

ಗ್ರಾಮದಲ್ಲಿ ರಸ್ತೆಗಳನ್ನು ಸ್ವಚ್ಛಗೊಳಿಸಿ ಸಂಭ್ರಮಾಚರಣೆಗೆ ಸಿದ್ಧತೆ ನಡೆಸಲಾಗುತ್ತಿದೆ. ಅಧಿಕಾರ ಸ್ವೀಕಾರ ಸಮಾರಂಭದ ಸಂದರ್ಭದಲ್ಲಿ ಹಂಚಲು ಗ್ರಾಮದ ಹಲವಡೆ ಸಾಂಪ್ರದಾಯಿಕ ‘ಮುರುಕ್ಕು’ ತಿಂಡಿ ತಯಾರಿಸಲಾಗುತ್ತಿದೆ.

ಗ್ರಾಮದ ದೇಗುಲಗಳಲ್ಲಿ ಕಮಲಾ ಅವರಿಗೆ ಶುಭಕೋರಿ ಪೂಜೆ, ಪ್ರಾರ್ಥನೆಗಳನ್ನೂ ಸಲ್ಲಿಸಲಾಗುತ್ತಿದೆ. ಗ್ರಾಮವು ಸಿಂಗಾರಗೊಂಡಿದ್ದು, ಎಲ್ಲೆಡೆ ಹಬ್ಬದ ವಾತಾವರಣ ಕಂಡುಬರುತ್ತಿದೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ADVERTISEMENT

2020ರಲ್ಲಿ ನಡೆದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೆಮಾಕ್ರಟಿಕ್ ಪಕ್ಷ ಅಧ್ಯಕ್ಷೀಯ ಅಭ್ಯರ್ಥಿ ಜೋ ಬೈಡೆನ್ ಮತ್ತು ಉಪಾಧ್ಯಕ್ಷ ಸ್ಥಾನದ ಅಭ್ಯರ್ಥಿ ಕಮಲಾ ಹ್ಯಾರಿಸ್ ಜಯ ಗಳಿಸಿದ್ದು, ಇಂದು ಅಧಿಕಾರ ಸ್ವೀಕರಿಸಲಿದ್ದಾರೆ.

ಕಮಲಾ ಅವರು ಅಮೆರಿಕದ ಉಪಾಧ್ಯಕ್ಷ ಸ್ಥಾನ ಹೊಂದುತ್ತಿರುವ ಪ್ರಥಮ ಭಾರತ ಸಂಜಾತ ಮಹಿಳೆಯಾಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.