ನವದೆಹಲಿ: ನೂತನ ಕೃಷಿ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆ ವಿಚಾರವಾಗಿ ಬಾಲಿವುಡ್ ನಟಿ ಕಂಗನಾ ರನೌತ್ ಅವರು ಮಾಡಿದ್ದ ವಿವಾದಾತ್ಮಕ ಟ್ವೀಟ್‌ಗಳನ್ನು ಅಳಿಸಿಹಾಕಲಾಗಿದೆ.
ಈ ಬಗ್ಗೆ ಸ್ಪಷ್ಟನೆ ನೀಡಿರುವ ಟ್ವಿಟರ್ ವಕ್ತಾರ, 'ಕಂಗನಾ ಅವರು ಟ್ವಿಟರ್ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಅವರ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದ ಟ್ವೀಟ್‌ಗಳನ್ನು ಅಳಿಸಿಹಾಕಲಾಗಿದೆ' ಎಂದು ತಿಳಿಸಿದ್ದಾರೆ.
ಕಂಗನಾ ಅವರು ಗುರುವಾರ ಮಾಡಿದ್ದ ಎರಡು ಟ್ವೀಟ್‌ಗಳನ್ನು ಅಳಿಸಿಹಾಕಲಾಗಿದೆ. ಈ ಟ್ವೀಟ್‌ಗಳಲ್ಲಿ ರೈತರನ್ನು ಭಯೋತ್ಪಾದಕರು ಮತ್ತು ಕ್ರಿಕೆಟಿಗರನ್ನು ನಾಯಿಗಳಿಗೆ ಹೋಲಿಸಿ ಕಂಗನಾ ಟ್ವೀಟ್ ಮಾಡಿದ್ದರು ಎಂದು ವರದಿಯಾಗಿದೆ.
ಟ್ವೀಟ್ ವಿಚಾರವಾಗಿ ಈ ಹಿಂದೆಯೂ ವಿವಾದಕ್ಕೆ ಸಿಲುಕಿದ್ದ ಕಂಗನಾ
ಅಮೆಜಾನ್ ಪ್ರೈಮ್ ವಿಡಿಯೊ ವೆಬ್ ಸರಣಿ 'ತಾಂಡವ್' ಬಗ್ಗೆ ಪ್ರತಿಕ್ರಿಯಿಸಿದ್ದ ಕಂಗನಾ ಹಿಂಸಾಚಾರಕ್ಕೆ ಪ್ರಚೋದಿಸುವಂತಹ ಆಕ್ಷೇಪಾರ್ಹ ಟ್ವೀಟ್ ಮಾಡಿದ್ದರು. ಇದು ವಿವಾದಕ್ಕೆ ಗ್ರಾಸವಾಗುತ್ತಿದ್ದಂತೆ ಟ್ವೀಟ್ ಅನ್ನು ಅಳಿಸಿಹಾಕಿದ್ದರು.
'ಎರಡು ಸಮುದಾಯಗಳ ನಡುವೆ ಕೋಮುದ್ವೇಷವನ್ನು ಪ್ರಚೋದಿಸುವ ಕೆಲಸವನ್ನು ಕಂಗನಾ ಮತ್ತು ಅವರ ಸಹೋದರಿ ರಂಗೋಲಿ ಮಾಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಮತ್ತು ಪೋಸ್ಟ್‌ಗಳನ್ನು ಹಾಕುವ ಮೂಲಕ ಬಾಲಿವುಡ್ ಬಗ್ಗೆ ಜನರ ಮನಸ್ಸಿನಲ್ಲಿ ಕೆಟ್ಟ ಭಾವನೆ ಮೂಡಿಸಿದ್ದಾರೆ' ಎಂದು ಮುನ್ನಾವರ್ ಅಲಿ ಎಂಬುವವರು ಬಾಂದ್ರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಇದನ್ನೂ ಓದಿ..
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.