ನವದೆಹಲಿ:ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿದಂತೆ ಜವಹರಲಾಲ್ ನೆಹರೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (ಜೆಎನ್‌ಯುಎಸ್‌ಯು) ಮಾಜಿ ಅಧ್ಯಕ್ಷ ಕನ್ಹಯ್ಯಕುಮಾರ್ ಮತ್ತು ಇತರರ ವಿರುದ್ಧ ದೆಹಲಿ ಪೊಲೀಸರು ಸಲ್ಲಿಸಲಾಗಿರುವ ಆರೋಪಪಟ್ಟಿಯ ವಿಚಾರಣೆಯನ್ನು ಜ.19ಕ್ಕೆ ಕೈಗೆತ್ತಿಕೊಳ್ಳಲಾಗುವುದು ಎಂದು ದೆಹಲಿ ಕೋರ್ಟ್ ಮಂಗಳವಾರ ಹೇಳಿದೆ.
ಮೊದಲು, ಮಂಗಳವಾರವೇ(ಜ.15) ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ನ್ಯಾಯಾಲಯ ಹೇಳಿತ್ತು. ಆದರೆ, ಜಿಲ್ಲಾ ನ್ಯಾಯಾಧೀಶ ದೀಪಕ್ ಶೆರಾವತ್ ರಜೆ ಹಾಕಿರುವುದರಿಂದ ಜ.19ಕ್ಕೆ ನಿಗದಿ ಮಾಡಲಾಯಿತು.
2016ರಲ್ಲಿ ಜೆಎನ್‌ಯು ಕ್ಯಾಂಪಸ್‌ನಲ್ಲಿ ದೇಶ ವಿರೋಧಿ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿದ್ದ ಪೊಲೀಸರು, ಕನ್ಹಯ್ಯಕುಮಾರ್, ಉಮರ್ ಖಾಲಿದ್, ಅನಿರ್ಬನ್ ಭಟ್ಟಾಚಾರ್ಯ ಮತ್ತು ಇತರರ ವಿರುದ್ಧ 200 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.