ADVERTISEMENT

ಕಾಂವಡ್ ಯಾತ್ರೆ:UP ಸರ್ಕಾರದ ‘ಹೆಸರು ಪ್ರದರ್ಶನ’ ಆದೇಶಕ್ಕೆ ಸುಪ್ರೀಂ ಕೋರ್ಟ್‌ ತಡೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 22 ಜುಲೈ 2024, 8:54 IST
Last Updated 22 ಜುಲೈ 2024, 8:54 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ಲಖನೌ: ಕಾಂವಡ್ ಯಾತ್ರೆ ಮಾರ್ಗದಲ್ಲಿನ ತಿಂಡಿ–ತಿನಿಸುಗಳ ಮಳಿಗೆಗಳ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ಆದೇಶಕ್ಕೆ ಇಂದು (ಸೋಮವಾರ) ಸುಪ್ರೀಂ ಕೋರ್ಟ್‌ ತಡೆ ನೀಡಿದೆ.

ನ್ಯಾಯಮೂರ್ತಿ ಹೃಷಿಕೇಶ್ ರಾಯ್ ನೇತೃತ್ವದ ಪೀಠವು ಅರ್ಜಿ ವಿಚಾರಣೆ ನಡೆಸಿತು. ‘ರಾಜ್ಯ ಸರ್ಕಾರ ಹೊರಡಿಸಿರುವ ಆದೇಶವು ಸಾಂವಿಧಾನಿಕ ಮತ್ತು ಕಾನೂನು ಮಾನದಂಡಗಳಿಗೆ ವಿರುದ್ಧವಾಗಿದೆ’ ಎಂದಿತು.

ಮಳಿಗೆಗಳ ಮಾಲೀಕರು ತಮ್ಮ ಹೆಸರನ್ನು ಮಳಿಗೆಗಳ ಮುಂದೆ ಉಲ್ಲೇಖಿಸಬೇಕು ಎಂಬ ಆದೇಶವನ್ನು ಆರಂಭದಲ್ಲಿ ಮುಜಾಫರ್‌ನಗರದಲ್ಲಿ ಮಾತ್ರ ಜಾರಿಗೊಳಿಸಲಾಗಿತ್ತು. ಬಳಿಕ ಸಿಎಂ ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ಈ ಆದೇಶವನ್ನು ರಾಜದಾದ್ಯಂತ ವಿಸ್ತರಿಸಿತ್ತು.

ADVERTISEMENT

ಕೋವಿಡ್‌ ಕಾರಣದಿಂದ ಕಳೆದೆರಡು ವರ್ಷಗಳಲ್ಲಿ ಕನ್ವರ್‌ ಯಾತ್ರೆ ನಡೆದಿರಲಿಲ್ಲ. ಈ ಯಾತ್ರೆಯ ವೇಳೆ ಶಿವಭಕ್ತರು ಗಂಗಾ ಜಲವನ್ನು ಸಂಗ್ರಹಿಸಿ ಅದನ್ನು ದೇಗುಲಕ್ಕೆ ಕೊಂಡೊಯ್ದು ಸಮರ್ಪಿಸುತ್ತಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.