ADVERTISEMENT

ಕಾವಡ್‌ ಯಾತ್ರೆ: ಹೆಸರು ಪ್ರದರ್ಶನ ನಿರ್ದೇಶನಕ್ಕಿದ್ದ ತಡೆಯಾಜ್ಞೆ ವಿಸ್ತರಣೆ

ಪಿಟಿಐ
Published 5 ಆಗಸ್ಟ್ 2024, 15:39 IST
Last Updated 5 ಆಗಸ್ಟ್ 2024, 15:39 IST
<div class="paragraphs"><p>ಸಾಂದರ್ಭಿಕ ಚಿತ್ರ&nbsp;</p></div>

ಸಾಂದರ್ಭಿಕ ಚಿತ್ರ 

   

ನವದೆಹಲಿ: ಕಾವಡ್‌ ಯಾತ್ರೆಯ ಮಾರ್ಗಗಳಲ್ಲಿರುವ ತಿಂಡಿ–ತಿನಿಸುಗಳ ಮಳಿಗೆಗಳ ಮಾಲೀಕರು ತಮ್ಮ ಹೆಸರು ಮತ್ತು ಇತರ ವಿವರಗಳನ್ನು ಮಳಿಗೆಗಳ ಮುಂದೆ ಪ್ರದರ್ಶಿಸುವಂತೆ ಉತ್ತರ ಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ಸರ್ಕಾರಗಳು ನೀಡಿದ್ದ ನಿರ್ದೇಶನಕ್ಕೆ ನೀಡಿರುವ ಮಧ್ಯಂತರ ತಡೆಯನ್ನು ಸುಪ್ರೀಂ ಕೋರ್ಟ್‌ ಸೋಮವಾರ ಮತ್ತೆ ವಿಸ್ತರಿಸಿದೆ. 

ನ್ಯಾಯಮೂರ್ತಿ ಹೃಷಿಕೇಶ ರಾಯ್‌ ಮತ್ತು ಆರ್‌.ಮಹಾದೇವನ್‌ ಅವರಿದ್ದ ನ್ಯಾಯಪೀಠವು ಸಮಯದ ಅಭಾವದಿಂದಾಗಿ ಪ್ರಕರಣದ ವಿಚಾರಣೆ ನಡೆಸಲಿಲ್ಲ, ಆದರೆ ಮಧ್ಯಂತರ ತಡೆಯನ್ನು ವಿಸ್ತರಿಸಿದೆ.

ADVERTISEMENT

‘ಕಾವಡ್‌ ಯಾತ್ರೆಯು ಪ್ರಸ್ತುತ ನಡೆಯುತ್ತಿದ್ದು, ಆಗಸ್ಟ್‌ 19ರಂದು ಮುಕ್ತಾಯವಾಗಲಿದೆ. ಆದ್ದರಿಂದ ಅದಕ್ಕೂ ಮೊದಲು ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರೊಬ್ಬರು ಮನವಿ ಮಾಡಿದ್ದರು. ಇದಕ್ಕೆ ಪ್ರತಿಕ್ರಯಿಸಿದ ನ್ಯಾಯಾಲಯ, ‘ಮುಂದಿನ ವಿಚಾರಣೆ ಬಗ್ಗೆ ನಿರ್ಧರಿಸದೆ ದಿನಾಂಕವನ್ನು ನಿಗದಿಪಡಸಲಾಗದು’ ಎಂದು ತಿಳಿಸಿದೆ.

ಕಾವಡ್‌ ಯಾತ್ರಿಕರಿಗೆ ಉಂಟಾಗುವ ಗೊಂದಲಗಳನ್ನು ದೂರ ಮಾಡುವ ಉದ್ದೇಶದಿಂದ ವರ್ತಕರು ತಮ್ಮ ಹೆಸರು ಮತ್ತು ಮಾಹಿತಿಯನ್ನು ಅಂಗಡಿ ಫಲಕಗಳಲ್ಲಿ ಅಳವಡಿಸಬೇಕು ಎಂದು ಉತ್ತರಪ್ರದೇಶ, ಉತ್ತರಾಖಂಡ ಮತ್ತು ಮಧ್ಯಪ್ರದೇಶ ಸರ್ಕಾರಗಳು ಆದೇಶಿಸಿದ್ದವು. ಈ ಆದೇಶವು ಮುಸ್ಲಿಂ ವಿರೋಧಿಯಾಗಿದೆ ಎಂದು ವಿರೋಧಪಕ್ಷಗಳು ಟೀಕಿಸಿದ್ದವು. 

ಈ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಕೆಯಾಗಿದ್ದ ಅರ್ಜಿಗಳನ್ನು ಕೈಗೆತ್ತಿಕೊಂಡಿದ್ದ ಸುಪ್ರೀಂ ಕೋರ್ಟ್‌ ಜುಲೈ 22ರಂದು ಮಧ್ಯಂತರ ತಡೆ ನೀಡಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.