ಮುಂಬೈ: ಪತ್ರಕರ್ತ, ಸಮಾಜವಾದಿ ಚಳವಳಿಯಲ್ಲಿ ಗುರುತಿಸಿಕೊಂಡಿದ್ದ ಮಾಜಿ ಶಾಸಕ ಕಪಿಲ್ ಪಾಟೀಲ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ. ಪಾಟೀಲ್ ಅವರು ಈ ಹಿಂದೆ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ನಂತರ ಜೆಡಿಯು ತೊರೆದು, ‘ಸಮಾಜವಾದಿ ಗಣರಾಜ್ಯ ಪಕ್ಷ’ವನ್ನು ಕಟ್ಟಿದ್ದರು.
‘ನಾಥೂರಾಮಿ–ಫ್ಯಾಸಿಸ್ಟ್ ವಿಚಾರಗಳ ವಿರುದ್ಧ ಹೋರಾಡಲು ಎಲ್ಲ ಪ್ರಗತಿಪರ ಶಕ್ತಿಗಳು ಒಗ್ಗೂಡಬೇಕು. ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಅಭಿಪ್ರಾಯಗಳಿಗೆ ಶಕ್ತಿ ತುಂಬುವ ಕೆಲಸವಾಗಬೇಕು. ಅದಕ್ಕಾಗಿ ನಾವೆಲ್ಲರೂ ಮುಖ್ಯವಾಹಿನಿಗೆ ಬರಲು ನಿರ್ಧರಿಸಿದೆವು’ ಎಂದು ಕಪಿಲ್ ಪಾಟೀಲ್ ತಿಳಿಸಿದ್ದಾರೆ.
ಕಮಲ್ ಫಾರೂಕಿ ಮತ್ತೆ ಕಾಂಗ್ರೆಸ್‌ಗೆ
ಸುಮಾರು 20 ವರ್ಷಗಳ ಹಿಂದೆ ಕಾಂಗ್ರೆಸ್ ತೊರೆದಿದ್ದ ಕಮಲ್ ಫಾರೂಕಿ ಅವರು ಮತ್ತೆ ಕಾಂಗ್ರೆಸ್ ಸೇರಿಕೊಂಡಿದ್ದಾರೆ. ಎನ್‌ಸಿಪಿ ಪಕ್ಷದ ಮಾಜಿ ವಕ್ತಾರ, ವಕೀಲ, ಫಾರೂಕಿ ಅವರ ಮಗ ಉಮರ್ ಕಮಲ್ ಫಾರೂಕಿ ಅವರು ಕೂಡ ಕಾಂಗ್ರೆಸ್ ಸೇರಿದ್ದಾರೆ. ವಿಧಾನಸಭೆ ಚುನಾವಣೆಯ ಈ ಹೊತ್ತಿನಲ್ಲಿ ಫಾರೂಕಿ ಅವರ ಸೇರ್ಪಡೆಯಿಂದಾಗಿ ರಾಜ್ಯದ ಮರಾಠಾವಾಡ ಪ್ರಾಂತ್ಯದಲ್ಲಿ ಕಾಂಗ್ರೆಸ್‌ಗೆ ಹೆಚ್ಚು ಅನುಕೂಲವಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.