ADVERTISEMENT

ಕರ್ನಾಟಕ ಚುನಾವಣೆ: ಗಡಿ ಜಿಲ್ಲೆಗಳಲ್ಲಿ 45 ಚೆಕ್‌ಪೋಸ್ಟ್‌ ಸ್ಥಾಪಿಸಿದ ಆಂಧ್ರಪ್ರದೇಶ

3008 ಲೀಟರ್‌ಗಳಷ್ಟು ಭಾರತದಲ್ಲಿ ತಯಾರಿಸಿದ ವಿದೇಶಿ ಮದ್ಯ, 90 ಮಿ.ಲೀ ನ 444 ಟೆಟ್ರಾ ಪ್ಯಾಕ್‌ ಮದ್ಯಗಳು, ಹಾಗೂ ಎರಡೂವರೆ ಕೆ.ಜಿಗಳಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ

ಪಿಟಿಐ
Published 1 ಮೇ 2023, 14:28 IST
Last Updated 1 ಮೇ 2023, 14:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಅಮರಾವತಿ: ಕರ್ನಾಟಕ ಚುನಾವಣೆ ಹಿನ್ನಲೆಯಲ್ಲಿ, ಅಕ್ರಮ ಮದ್ಯ, ಹಣ ಸರಬರಾಜು ಹಾಗೂ ಇನ್ನಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯಲು ಆಂಧ್ರಪ್ರದೇಶ ಸರ್ಕಾರವು ಗಡಿ ಜಿಲ್ಲೆಗಳಲ್ಲಿ 45 ಚೆಕ್‌ಪೋಸ್ಟ್‌ಗಳನ್ನುಸ್ಥಾಪಿಸಿದೆ ಎಂದು ಮುಖ್ಯ ಕಾರ್ಯದರ್ಶಿ ಕೆ.ಎಸ್‌ ಜವಾಹರ್‌ ರೆಡ್ಡಿ ತಿಳಿಸಿದ್ದಾರೆ.

ಈ ಚೆಕ್‌ಪೋಸ್ಟ್‌ಗಳಲ್ಲಿ ಪೊಲೀಸ್‌, ಅಬಕಾರಿ, ವಾಣಿಜ್ಯ ತೆರಿಗೆ ಹಾಗೂ ಇನ್ನಿತರ ಇಲಾಖೆಗಳ ಅಧಿಕಾರಿಗಳು ಇರಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

’ಈಗಾಗಲೇ, 3008 ಲೀಟರ್‌ಗಳಷ್ಟು ಭಾರತದಲ್ಲಿ ತಯಾರಿಸಿದ ವಿದೇಶಿ ಮದ್ಯ, 90 ಮಿ.ಲೀ ನ 444 ಟೆಟ್ರಾ ಪ್ಯಾಕ್‌ ಮದ್ಯಗಳು, ಹಾಗೂ ಎರಡೂವರೆ ಕೆ.ಜಿಗಳಷ್ಟು ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.

ADVERTISEMENT

ಸೋಮವಾರ ಮುಖ್ಯ ಚುನಾವಣಾಧಿಕಾರಿ ಹಾಗೂ ಇತರ ಚುನಾವಣಾಧಿಕಾರಿಗಳು, ವಿವಿಧ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳು, ಪೊಲೀಸ್‌ ಮಹಾನಿರ್ದೇಶಕರು, ಮುಖ್ಯ ಚುನಾವಣಾಧಿಕಾರಿಗಳು ಹಾಗೂ ಇನ್ನಿತರ ಹಿರಿಯ ಅಧಿಕಾರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಸಭೆ ನಡೆಸಿದ್ದರು.

ಸಮಾಜ ವಿರೋಧಿ ಚುಟವಟಿಕೆ ತಡೆಯಲು ಹಾಗೂ ಕಾನೂನು ಬಾಹಿರ ಚಟುವಟಿಕೆ ನಿಯಂತ್ರಣಕ್ಕೆ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಬೇಕು ಎಂದು ಮುಖ್ಯಚುನಾವಣಾ ಅಧಿಕಾರಿ ಸೂಚನೆ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.