ನವದೆಹಲಿ: ಕರ್ನಾಟಕದ ಕಾಂಗ್ರೆಸ್ ಸರ್ಕಾರವು ‘ನನ್ನ ತೆರಿಗೆ ನನ್ನ ಹಕ್ಕು–ಚಲೋ ದಿಲ್ಲಿ’ ಹೆಸರಿನಲ್ಲಿ ಜಂತರ್‌ಮಂತರ್‌ನಲ್ಲಿ ಪ್ರತಿಭಟನೆ ಹಮ್ಮಿಕೊಂಡಿದೆ.
ಕೇಂದ್ರ ಸರ್ಕಾರವು ತೆರಿಗೆ ಹಂಚಿಕೆಯಲ್ಲಿ ಅನ್ಯಾಯ ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ಆರಂಭವಾಗಿದೆ.
ಪ್ರತಿಭಟನೆ ನಡೆಸಲು ದೆಹಲಿ ಪೊಲೀಸರು ಎರಡು ಗಂಟೆ ಮಾತ್ರ ಅವಕಾಶ ನೀಡಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರದ ಬಜೆಟ್ ಗಾತ್ರದ ಹೆಚ್ಚಳಕ್ಕೆ ತಕ್ಕಂತೆ ತೆರಿಗೆ ಆದಾಯದಲ್ಲಿ ಕರ್ನಾಟಕಕ್ಕೆ ಹಣ ಹಂಚಿಕೆಯಾಗಿಲ್ಲ ಎಂದು ಆರೋಪಿಸಿದ್ದಾರೆ.
ಸಚಿವರು, ಶಾಸಕರು ಕೇಂದ್ರದ ವಿರುದ್ಧ ಭಿತ್ತಿತ್ರಗಳನ್ನು ಹಿಡಿದು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.
ಹೆಚ್ಚಿನ ಮಾಹಿತಿಗೆ ನಿರೀಕ್ಷಿಸಿ Prajavani.net
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.