ನವದೆಹಲಿ: ವಿಧಾನಸಭೆಯಲ್ಲಿ ಇಂದೇ ವಿಶ್ವಾಸಮತ ಯಾಚನೆಗೆ ಸೂಚಿಸಬೇಕು ಎಂದು ಕೋರಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವವರ ಪರ ವಕೀಲ ಮುಕುಲ್ ರೋಹಟಗಿ ಸಲ್ಲಿಸಿದ ಅರ್ಜಿಯನ್ನು ಪರಿಶೀಲಿಸಿದಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ನೇತೃತ್ವದ ನ್ಯಾಯಪೀಠವು ‘ಇಂದು ವಿಚಾರಣೆ ನಡೆಸುವುದು ಸಾಧ್ಯವಿಲ್ಲ’ ಎಂದು ಹೇಳಿತು.
ಕರ್ನಾಟಕ ರಾಜಕಾರಣದ ತಾಜಾ ಮಾಹಿತಿಗೆ...http://bit.ly/2JUjq6j
‘ನಾಳೆ ಬೆಳಿಗ್ಗೆ ಈ ಅರ್ಜಿಯನ್ನು ಮೊದಲನೆಯದಾಗಿ ವಿಚಾರಣೆಗೆ ತೆಗೆದುಕೊಳ್ಳಿ’ ಎಂದು ಮುಕುಲ್ ರೋಹಟಗಿ ಮತ್ತೊಂದು ಮನವಿ ಸಲ್ಲಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಮುಖ್ಯ ನ್ಯಾಯಮೂರ್ತಿ, ‘ನಾಳೆಗೆ ಬೇಕಾದರೆ ನೋಡೋಣ’ ಎಂದು ಪ್ರತಿಕ್ರಿಯಿಸಿದರು.
ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದ ಕೆಪಿಸಿಸಿ ಅಧ್ಯಕ್ಷದಿನೇಶ್ ಗುಂಡೂರಾವ್ ಮತ್ತು ಜೆಡಿಎಸ್ ಹಾಗೂಶಾಸಕರಾದಶಂಕರ್ ಮತ್ತು ನಾಗೇಶ್ ಪರ ವಕೀಲರ ಮನವಿಗಳಿಗೂ ನ್ಯಾಯಪೀಠವು ಕಿವಿಗೊಡಲಿಲ್ಲ.
‘ಇಂದು ಸಂಜೆ 5 ಗಂಟೆಯ ಒಳಗೆ ವಿಶ್ವಾಸಮತ ಯಾಚನೆಗೆ ಸೂಚಿಸಿ’ ಎಂದು ಅತೃಪ್ತರ ಪರ ವಕೀಲ ಮುಕುಲ್ ರೋಹಟಗಿ ಕೋರಿದ್ದರು.‘ಸ್ಪೀಕರ್ ಕಾರ್ಯವ್ಯಾಪ್ತಿಯಲ್ಲಿ ಮಧ್ಯಪ್ರವೇಶ ಸಾಧ್ಯವಿಲ್ಲ. ಕಾಲಮಿತಿಯೊಳಗೆ ವಿಶ್ವಾಸಮತ ನಿರ್ಣಯವನ್ನು ಮತಕ್ಕೆ ಹಾಕಿ ಎಂದು ಸೂಚಿಸಲು ಆಗುವುದಿಲ್ಲ’ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿತು.
ಕರ್ನಾಟಕದಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ. ಬಹುಮತಕ್ಕಾಗಿ ಶಾಸಕರನ್ನು ಖರೀದಿಸಲಾಗುತ್ತಿದೆ ಎಂದು ಮಾಧ್ಯಮ ವರದಿಗಳನ್ನು ಉಲ್ಲೇಖಿಸಿ ವಕೀಲೆ ಲಿಲ್ಲಿ ಥಾಮಸ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳಲು ಸುಪ್ರೀಂಕೋರ್ಟ್ ನಿರಾಕರಿಸಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.