ADVERTISEMENT

ರೈತರಿಗೆ ವಕ್ಫ್ ನೋಟಿಸ್‌: ಉಗ್ರ ಹೋರಾಟ ನಡೆಸುತ್ತೇವೆ ಎಂದ ಬಿಜೆಪಿ

ಪಿಟಿಐ
Published 1 ನವೆಂಬರ್ 2024, 11:27 IST
Last Updated 1 ನವೆಂಬರ್ 2024, 11:27 IST
<div class="paragraphs"><p>ರವಿಶಂಕರ್ ಪ್ರಸಾದ್‌</p></div>

ರವಿಶಂಕರ್ ಪ್ರಸಾದ್‌

   

–ಪಿಟಿಐ ಚಿತ್ರ

ನವದೆಹಲಿ: ವೋಟ್‌ ಬ್ಯಾಂಕ್ ರಾಜಕೀಯಕ್ಕಾಗಿ ರೈತರ ಹಾಗೂ ದೇವಸ್ಥಾನದ ಜಮೀನುಗಳನ್ನು ಕಾಂಗ್ರೆಸ್ ವಕ್ಫ್ ಆಸ್ತಿಯಾಗಿ ಪರಿವರ್ತಿಸುತ್ತಿದೆ ಎಂದು ಬಿಜೆಪಿ ಶುಕ್ರವಾರ ಆರೋಪಿಸಿದೆ. ಅಲ್ಲದೆ ಇದರ ವಿರುದ್ಧ ಉಗ್ರ ಹೋರಾಟ ನಡೆಸುವುದಾಗಿ ಹೇಳಿದೆ.

ADVERTISEMENT

ವಕ್ಫ್ ಆಸ್ತಿಯನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲೆಯ ರೈತರಿಗೆ ನೀಡಿದ ನೋಟಿಸ್‌ ಅನ್ನು ಉಲ್ಲೇಖಿಸಿ ಬಿಜೆಪಿಯ ಹಿರಿಯ ನಾಯಕ ಹಾಗೂ ಕಾನೂನು ಇಲಾಖೆಯ ಮಾಜಿ ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ. ಅಲ್ಲದೇ ದೇವಸ್ಥಾನದ ಭೂಮಿಯೂ ಇಂಥಹದ್ದೇ ಸಮಸ್ಯೆ ಎದುರಿಸುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಕಳೆದ ಮೂರು ವಾರದಲ್ಲಿ ರೈತರ 44 ಆಸ್ತಿಗಳಿಗೆ ನೋಟಿಸ್‌ ನೀಡಲಾಗಿದೆ ಎಂದು ಅವರು ಮಾಧ್ಯಮದವರೊಂದಿಗೆ ಹೇಳಿದ್ದಾರೆ.

‘ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಕಾಂಗ್ರೆಸ್ ಈ ರೀತಿ ಮಾಡುತ್ತಿದೆ. ಬಿಜೆಪಿ ಇದರ ವಿರುದ್ಧ ಉಗ್ರ ಹೋರಾಟ ನಡೆಸಲಿದೆ’ ಎಂದಿದ್ದಾರೆ.

ಗೆಜೆಟ್ ಅಧಿಸೂಚನೆಯಲ್ಲಿ ದೋಷವಿದ್ದಿದ್ದೇ ನೋಟಿಸ್ ನೀಡಲು ಕಾರಣ ಎಂದು ಸಚಿವ ಎಂ.ಬಿ. ಪಾಟೀಲ ಬಿಕ್ಕಟ್ಟು ಶಮನಗೊಳಿಸುವ ಪ್ರಯತ್ನ ಮಾಡಿದ್ದಾರೆ’ ಎಂದು ರವಿಶಂಕರ್ ಪ್ರಸಾದ್‌ ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.