ಕಸ್ಗಂಜ್(ಉತ್ತರ ಪ್ರದೇಶ): ‘ಕಸ್ಗಂಜ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಪೊಲೀಸ್ ಎನ್‌ಕೌಂಟರ್‌ನಲ್ಲಿಭಾನುವಾರ ಬೆಳಿಗ್ಗೆ ಹತನಾಗಿದ್ದಾನೆ’ ಎಂದು ಅಧಿಕಾರಿಗಳು ತಿಳಿಸಿದರು.
‘ಕಾಳಿ ನದಿಯ ಬಳಿಯಿರುವ ಅರಣ್ಯದಲ್ಲಿ ಮೋತಿ ಮತ್ತು ಆತನ ಸಹಚರರು ಅಡಗಿರುವ ಮಾಹಿತಿ ಮೇರೆಗೆ ಪೊಲೀಸರು ಶೋಧ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಈ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೋತಿಗೆ ಗಾಯಗಳಾಗಿತ್ತು’ ಎಂದು ಪೊಲೀಸರು ಹೇಳಿದರು.
‘ಮೋತಿಯನ್ನು ಸಿದ್ದಾಪುರದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಯಿತು. ಆದರೆ ಆತನ ಪರಿಸ್ಥಿತಿ ಗಂಭೀರವಾಗಿದ್ದರಿಂದ ವೈದ್ಯರು ಕಸ್ಗಂಜ್ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲು ಹೇಳಿದರು. ನಾವು ಆಸ್ಪತ್ರೆಗೆ ತಲುಪುವಷ್ಟರಲ್ಲಿ ಆತ ಮೃತಪಟ್ಟಿದ್ದ’ ಎಂದು ಪೊಲೀಸರು ಮಾಹಿತಿ ನೀಡಿದರು.
‘ಘಟನಾ ಸ್ಥಳದಿಂದ ಪಿಸ್ತೂಲ್ ಮತ್ತು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ. ಮೃತ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ’ ಎಂದು ಅವರು ತಿಳಿಸಿದರು.
ಫೆಬ್ರುವರಿ 9 ರಂದು ಮಧ್ಯ ಮಾಫಿಯಾದ ಕಿಂಗ್‌ಪಿನ್ ಮೋತಿ ಧೀಮರ್‌ನನ್ನು ಬಂಧಿಸಲೆಂದು ಪೊಲೀಸ್ ಕಾನ್‌ಸ್ಟೆಬಲ್ ಮತ್ತು ಸಬ್ ಇನ್‌ಸ್ಪೆಕ್ಟರ್ ಒಬ್ಬರು ನಾಗ್ಲಾ ದೀಮರ್ ಗ್ರಾಮಕ್ಕೆ ತೆರಳಿದ್ದರು. ಈ ವೇಳೆ ಅಧಿಕಾರಿಗಳನ್ನು ಹಿಗ್ಗಾಮುಗ್ಗಾ ಥಳಿಸಲಾಗಿದೆ. ಇದರಲ್ಲಿ ಪೊಲೀಸ್ ಕಾನ್‌ಸ್ಟೆಬಲ್ ದೇವೇಂದ್ರ ಅವರು ಮೃತಪಟ್ಟಿದ್ದರು. ಸಬ್ ಇನ್‌ಸ್ಪೆಕ್ಟರ್ ಅಶೋಕ್ ಕುಮಾರ್‌ಗೆ ಗಾಯಗಳಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.