ADVERTISEMENT

ದೇಶವು ಮುಂದಿನ 5 ವರ್ಷಗಳಲ್ಲಿ ಅಭಿವೃದ್ಧಿಯ ಮಾದರಿಯಾಗಲಿದೆ: ನರೇಂದ್ರ ಮೋದಿ

ಪಿಟಿಐ
Published 23 ಫೆಬ್ರುವರಿ 2024, 9:33 IST
Last Updated 23 ಫೆಬ್ರುವರಿ 2024, 9:33 IST
<div class="paragraphs"><p>ಪ್ರಧಾನಿ ನರೇಂದ್ರ ಮೋದಿ</p></div>

ಪ್ರಧಾನಿ ನರೇಂದ್ರ ಮೋದಿ

   

ಪಿಟಿಐ ಚಿತ್ರ

ವಾರಾಣಸಿ: 'ದೇಶವು ಮುಂದಿನ ಐದು ವರ್ಷಗಳಲ್ಲಿ ಅಭಿವೃದ್ಧಿಯ ಮಾದರಿಯಾಗಲಿದೆ. ಇದು 'ಮೋದಿ ಗ್ಯಾರಂಟಿ'' ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಹೇಳಿದ್ದಾರೆ.

ADVERTISEMENT

ಲೋಕಸಭೆಯಲ್ಲಿ ತಾವು ಪ್ರತಿನಿಧಿಸುತ್ತಿರುವ ವಾರಾಣಸಿಗೆ ಗುರುವಾರ ರಾತ್ರಿ ಭೇಟಿ ನೀಡಿದ ಅವರು, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡಿದರು.

ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ಮಾತನಾಡಿದ ಪ್ರಧಾನಿ, ಕಾಶಿ ಇದೀಗ ವಿಶ್ವದಾದ್ಯಂತ ಪರಂಪರೆ ಮತ್ತು ಅಭಿವೃದ್ಧಿಗೆ ಮಾದರಿಯಾಗಿದೆ. ಸಂಸ್ಕೃತಿ ಮತ್ತು ಸಂಪ್ರದಾಯದ ಸುತ್ತ ಆಧುನಿಕವಾಗಿ ಅಭಿವೃದ್ಧಿ ಸಾಧಿಸುವುದು ಹೇಗೆ ಎಂಬುದಕ್ಕೆ ಜಗತ್ತು ಸಾಕ್ಷಿಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಶ್ರೀಮಂತ ಪರಂಪರೆಯ ಪ್ರತಿಧ್ವನಿಯು ವಿಶ್ವದೆಲ್ಲೆಡೆ ಕೇಳಿಬರುತ್ತಿದೆ ಎಂದ ಮೋದಿ, ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22ರಂದು ನಡೆದ ಬಾಲ ರಾಮ ಪ್ರಾಣಪ್ರತಿಷ್ಠಾಪನೆ ಕುರಿತಾಗಿಯೂ ಮಾತನಾಡಿದರು.

'ಬಾಲರಾಮನ ಮೂರ್ತಿ ಪ್ರತಿಷ್ಠಾಪನೆಯಾದ ಬಳಿಕ, ಅಯೋಧ್ಯೆಯು ಕಾಶಿಯಂತೆಯೇ ವಿಜೃಂಭಿಸುತ್ತಿದೆ' ಎಂದರು.

ಇದೇ ವೇಳೆ ಅವರು, 'ಸಂಸದ್‌ ಸಂಸ್ಕೃತ್‌ ಪ್ರತಿಯೋಗಿತಾ' ಪುರಸ್ಕೃತರೊಂದಿಗೆ ಸಂವಾದ ನಡೆಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.