ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುತ್ತಿದ್ದು, ಸದ್ಯ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ ಎಂದು ಸಿಆರ್ಪಿಎಫ್ ಮಹಾ ನಿರೀಕ್ಷಕ (ಶ್ರೀನಗರ ವಲಯ) ಪಿ.ಕೆ. ಶರ್ಮಾ ಬುಧವಾರ ತಿಳಿಸಿದ್ದಾರೆ.
ಇಲ್ಲಿ ನಡೆಯುತ್ತಿರುವ ಎರಡನೇ ಆವೃತ್ತಿಯ ‘ಸಿಆರ್ಪಿಎಫ್ ಕಪ್’ ಕ್ರಿಕೆಟ್ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ‘ಕ್ರೀಡೆಗಳು ಸಹಜವಾಗಿ ಯುವಕರ ಪಾಲ್ಗೊಳ್ಳುವಿಕೆಯನ್ನು ಉತ್ತೇಜಿಸುತ್ತವೆ. ಕಾಶ್ಮೀರದಲ್ಲಿ ಸ್ಥಳೀಯ ಯುವಕರೊಂದಿಗೆ ನಿಕಟ ಸಂಪರ್ಕ ಸಾಧಿಸುವ ಉದ್ದೇಶದಿಂದ ಈ ಕ್ರೀಡಾಕೂಟವನ್ನು ಆಯೋಜಿಸಲಾಗಿದೆ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.