ADVERTISEMENT

ತಹಶೀಲ್ ಕಚೇರಿಯೊಳಗೆ ನುಗ್ಗಿ ಕಾಶ್ಮೀರಿ ಪಂಡಿತ್‌ ನೌಕರನ ಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಮೇ 2022, 14:00 IST
Last Updated 12 ಮೇ 2022, 14:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಶ್ರೀನಗರ: ಮಧ್ಯ ಕಾಶ್ಮೀರದ ಬುಡ್ಗಾಂ ಜಿಲ್ಲೆಯ ಚದೂರ ತಹಶೀಲ್‌ ಕಚೇರಿಯಲ್ಲಿ ಗುರುವಾರ ಉಗ್ರನೊಬ್ಬ ಕಾಶ್ಮೀರಿ ಪಂಡಿತ ಸಮುದಾಯದ ಸರ್ಕಾರಿ ನೌಕರರೊಬ್ಬರನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದಾನೆ.

ರಾಹುಲ್‌ ಭಟ್‌ ಹತ್ಯೆಯಾದ ಸರ್ಕಾರಿ ನೌಕರ. ‘ಚದೂರು ಪಟ್ಟಣದ ತಹಶೀಲ್‌ ಕಚೇರಿಯಲ್ಲಿ ಗುಮಸ್ತರಾಗಿ ಕೆಲಸ ನಿರ್ವಹಿಸುತ್ತಿದ್ದು, ಗುರುವಾರ ರಾಹುಲ್‌ ಭಟ್‌ ಅವರ ಕೊಠಡಿಯನ್ನು ಏಕಾಏಕಿ ಪ್ರವೇಶಿಸಿದ ಉಗ್ರ ಗುಂಡು ಹಾರಿಸಿದ್ದಾನೆ. ಈ ವೇಳೆ ಗುಂಡೇಟಿನಿಂದ ತೀವ್ರ ಗಾಯಗೊಂಡಿದ್ದ ರಾಹುಲ್‌ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟರು’ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದರು.

ದಾಳಿಕೋರರ ಪತ್ತೆಗಾಗಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಆರಂಭಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.