ಹೈದರಾಬಾದ್: ಚುನಾವಣೆಯಲ್ಲಿ ಬಿಆರ್‌ಎಸ್ ಸೋಲು ಕಂಡ ನಂತರದಲ್ಲಿ, ಕೆ. ಚಂದ್ರಶೇಖರ ರಾವ್ ಅವರು ತೆಲಂಗಾಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆ ಪತ್ರವನ್ನು ಅವರು ರಾಜ್ಯಪಾಲೆ ತಮಿಳ್‌ಇಸೈ ಸೌಂದರರಾಜನ್ ಅವರಿಗೆ ರವಾನಿಸಿದ್ದಾರೆ ಎಂದು ಪಕ್ಷದ ಕಾರ್ಯಾಧ್ಯಕ್ಷ ಕೆ.ಟಿ. ರಾಮ ರಾವ್ ಅವರು ತಿಳಿಸಿದ್ದಾರೆ.
ಕೆಸಿಆರ್ ಅವರ ನೇತೃತ್ವದಲ್ಲಿ ಬಿಆರ್‌ಎಸ್ ಪಕ್ಷವು ತೆಲಂಗಾಣದ ಜನರ ಒಳಿತಿಗಾಗಿ ಕೆಲಸ ಮಾಡುವುದನ್ನು ಮುಂದುವರಿಸಲಿದೆ ಎಂದು ರಾಮ ರಾವ್ ಅವರು ಹೇಳಿದ್ದಾರೆ. ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಪಕ್ಷಕ್ಕೆ ಅಭಿನಂದನೆ ಹೇಳಿರುವ ರಾಮ ರಾವ್, ಹೊಸ ಸರ್ಕಾರಕ್ಕೆ ಎಲ್ಲ ಬಗೆಯ ಸಹಕಾರವನ್ನು ತಮ್ಮ ಪಕ್ಷ ನೀಡಲಿದೆ ಎಂದು ತಿಳಿಸಿದ್ದಾರೆ. ಬಿಆರ್‌ಎಸ್ ಪಕ್ಷವು ರಚನಾತ್ಮಕ ವಿರೋಧ ಪಕ್ಷದ ಕೆಲಸವನ್ನು ನಿರ್ವಹಿಸಲಿದೆ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.