ADVERTISEMENT

ಬೀದಿ ನಾಯಿ ಪೋಷಣೆ ಎಂದರೆ ಸಾರ್ವಜನಿಕರಿಗೆ ತೊಂದರೆ ನೀಡುವುದಲ್ಲ: ಸುಪ್ರೀಂ ಕೋರ್ಟ್‌

ಪಿಟಿಐ
Published 18 ನವೆಂಬರ್ 2022, 11:21 IST
Last Updated 18 ನವೆಂಬರ್ 2022, 11:21 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ತಾವು ಪೋಷಿಸುತ್ತಿರುವ 60ಕ್ಕೂ ಹೆಚ್ಚಿನ ಬೀದಿ ನಾಯಿಗಳಿಗೆ ರಕ್ಷಣೆ ನೀಡಬೇಕೆಂದು ಕೋರಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್‌ ಶುಕ್ರವಾರ ವಜಾಗೊಳಿಸಿದೆ.

ಅರ್ಜಿಯ ವಿಚಾರಣೆ ನಡೆಸಿದ, ನ್ಯಾಯಮೂರ್ತಿಗಳಾದ ಎಂ.ಆರ್‌.ಶಾ ಮತ್ತು ಎಂ.ಎಂ.ಸುಂದರೇಶ್‌ ಅವರನ್ನು ಒಳಗೊಂಡ ನ್ಯಾಯಪೀಠ, ‘ಬೀದಿ ನಾಯಿಗಳನ್ನು ಸಾಕುವುದು ಎಂದರೆ ಅವುಗಳನ್ನು ಬೀದಿಗೆ ಕೊಂಡೊಯ್ದು, ಪರಸ್ಪರ ಕಚ್ಚಾಡಲು ಅವಕಾಶ ನೀಡುವುದು, ಸಾರ್ವಜನಿಕರಿಗೆ ತೊಂದರೆ ನೀಡುವುದು ಎಂದರ್ಥವಲ್ಲ’ ಎಂದು ಹೇಳಿದೆ.

ಮಧ್ಯಪ್ರದೇಶ ಮೂಲದ ಸಮ್ರಿನ್‌ ಬಾನೊ ಎಂಬುವರು, ರಾಜ್ಯದಲ್ಲಿ ಬೀದಿ ನಾಯಿಗಳಿಗೆ ರಕ್ಷಣೆ ಇಲ್ಲ. ತಾವು ಪೋಷಿಸುತ್ತಿರುವ ನಾಯಿಗಳಿಗೆ ರಕ್ಷಣೆ ನೀಡಬೇಕು ಎಂದು ಕೋರಿ ಸುಪ್ರೀಂಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.