ADVERTISEMENT

ಸ್ವಾತಿ ಮಾಲಿವಾಲ್ ಹಲ್ಲೆ ಪ್ರಕರಣ: ಬಿಭವ್ ಕುಮಾರ್‌ಗೆ 4 ದಿನಗಳ ನ್ಯಾಯಾಂಗ ಬಂಧನ

ಪಿಟಿಐ
Published 24 ಮೇ 2024, 12:19 IST
Last Updated 24 ಮೇ 2024, 12:19 IST
   

ನವದೆಹಲಿ: ಎಎಪಿ ರಾಜ್ಯಸಭಾ ಸಂಸದೆ ಸ್ವಾತಿ ಮಾಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಸಹಾಯಕ ಬಿಭವ್ ಕುಮಾರ್ ಅವರಿಗೆ ದೆಹಲಿ ನ್ಯಾಯಾಲಯ ಶುಕ್ರವಾರ ನಾಲ್ಕು ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಬಿಭವ್ ಕುಮಾರ್ ಅವರನ್ನು ನಾಲ್ಕು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬೇಕು ಎಂದು ಕೋರಿ ಪ್ರಾಸಿಕ್ಯೂಷನ್ ಮಾಡಿದ ಮನವಿಯನ್ನು ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಗೌರವ್ ಗೋಯಲ್ ಅವರು ಮನ್ನಿಸಿದ್ದಾರೆ.

ಮೇ 13 ರಂದು ಮುಖ್ಯಮಂತ್ರಿ ಕೇಜ್ರಿವಾಲ್ ಅವರ ಅಧಿಕೃತ ನಿವಾಸದಲ್ಲಿ ಬಿಭವ್ ಕುಮಾರ್, ಮಾಲಿವಾಲ್ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವಿದೆ. ಪ್ರಕರಣ ಸಂಬಂಧ ದೆಹಲಿ ಪೊಲೀಸರು ಮೇ 18 ರಂದು ಬಿಭವ್ ಕುಮಾರ್ ಅವರನ್ನು ಬಂಧಿಸಿದ್ದರು .

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.