ADVERTISEMENT

ಕಣ್ಣೂರಿನ ಹೆಚ್ಚುವರಿ ಜಿಲ್ಲಾಧಿಕಾರಿ ಆತ್ಮಹತ್ಯೆ ಪ್ರಕರಣ:CPM ನಾಯಕಿ ದಿವ್ಯಾ ಬಂಧನ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 29 ಅಕ್ಟೋಬರ್ 2024, 10:44 IST
Last Updated 29 ಅಕ್ಟೋಬರ್ 2024, 10:44 IST
<div class="paragraphs"><p>ಸಿಪಿಎಂ ನಾಯಕಿ ದಿವ್ಯಾ </p></div>

ಸಿಪಿಎಂ ನಾಯಕಿ ದಿವ್ಯಾ

   

Credit: X/@Rockumon

ತಿರುವನಂತಪುರ: ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್‌ ಬಾಬು (55) ಆತ್ಮಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸಿಪಿಎಂ ನಾಯಕಿ ದಿವ್ಯಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯವು ಇಂದು (ಮಂಗಳವಾರ) ವಜಾಗೊಳಿಸಿದೆ.

ADVERTISEMENT

ಇದರ ಬೆನ್ನಲ್ಲೇ ನವೀನ್‌ ಬಾಬು ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಮೇಲೆ ದಿವ್ಯಾ ಅವರನ್ನು ಬಂಧಿಸಲಾಗಿದೆ ಎಂದು ಕಣ್ಣೂರು ನಗರ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.

ಅಕ್ಟೋಬರ್‌ 15ರಂದು ಸಿಪಿಎಂ ನಾಯಕಿ ದಿವ್ಯಾ ಅವರು ಸಾರ್ವಜನಿಕವಾಗಿ ಅವಹೇಳನಾಕಾರಿ ಹೇಳಿಕೆ ನೀಡಿದ ಬೆನ್ನಲ್ಲೇ, ಕೇರಳದ ಕಣ್ಣೂರು ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ನವೀನ್‌ ಬಾಬು (55) ಅವರ ಮೃತದೇಹವು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.

ಕಣ್ಣೂರು ಜಿಲ್ಲೆಯ ಪಂಚಾಯಿತಿ ಅಧ್ಯಕ್ಷೆ ಮತ್ತು ಸಿಪಿಎಂ ನಾಯಕಿ ಪಿ.ಪಿ.ದಿವ್ಯಾ ಅವರು ಕಾರ್ಯಕ್ರಮವೊಂದರಲ್ಲಿ ಬಾಬು ಅವರ‌ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಬಾಬು ಅವರನ್ನು ಭ್ರಷ್ಟ ಎಂದು ಕರೆದಿದ್ದರು.

ಬಾಬು ಅವರ ನಿಧನದ ಬೆನಲ್ಲೇ ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರು ದಿವ್ಯಾ ಅವರು ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.