ADVERTISEMENT

ಬಿಜೆಪಿ ಮುಖಂಡ ರಂಜಿತ್‌ ಹತ್ಯೆ ಪ್ರಕರಣ: ಪಿಎಫ್‌ಐನ 15 ಕಾರ್ಯಕರ್ತರು ದೋಷಿಗಳು

ಪಿಟಿಐ
Published 20 ಜನವರಿ 2024, 15:55 IST
Last Updated 20 ಜನವರಿ 2024, 15:55 IST
ಬಂಧನ (ಸಾಂದರ್ಭಿಕ ಚಿತ್ರ)
ಬಂಧನ (ಸಾಂದರ್ಭಿಕ ಚಿತ್ರ)   

ಆಲಪ್ಪುಳ (ಕೇರಳ): ಬಿಜೆಪಿ ಮುಖಂಡ ರಂಜಿತ್‌ ಶೀನಿವಾಸನ್‌ ಕೊಲೆ ಪ್ರಕರಣದಲ್ಲಿ, ಈಗ ನಿಷೇಧಿಸಲಾಗಿರುವ ಪಾಪ್ಯುಲರ್‌ ಫ್ರಂಟ್‌ ಆಫ್ ಇಂಡಿಯಾದ (ಪಿಎಫ್‌ಐ) 15 ಮಂದಿ ಕಾರ್ಯಕರ್ತರು ದೋಷಿಗಳೆಂದು ಇಲ್ಲಿನ ನ್ಯಾಯಾಲಯ ಶನಿವಾರ ಘೋಷಿಸಿದೆ.

ಬಿಜೆಪಿ ಒಬಿಸಿ ಮೋರ್ಚಾದ ರಾಜ್ಯ ಘಟಕ ಕಾರ್ಯದರ್ಶಿಯಾಗಿದ್ದ ರಂಜಿತ್‌ ಅವರನ್ನು 2021 ಡಿಸೆಂಬರ್‌ 19ರಂದು ಅವರ ಮನೆಯಲ್ಲಿ, ಕುಟುಂಬ ಸದಸ್ಯರ ಮುಂದೆಯೇ ಹತ್ಯೆ ಮಾಡಲಾಗಿತ್ತು. ಪಿಎಫ್‌ಐ ಮತ್ತು ಸೋಷಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ಕಾರ್ಯಕರ್ತರು ಈ ಕೃತ್ಯ ಎಸಗಿದ್ದರು ಎಂದು ಆರೋಪಿಸಲಾಗಿತ್ತು.

ಮಾವೇಲಿಕ್ಕರ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ವಿ.ಜಿ. ಶ್ರೀದೇವಿ ಅವರು ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸಲಿದ್ದಾರೆ.

ADVERTISEMENT

ಎಂಟು ಮಂದಿ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ನ್ಯಾಯಾಲಯ ಹೇಳಿರುವುದಾಗಿ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.