ತಿರುವನಂತಪುರಂ:ಪ್ರವಾಹ ಪೀಡಿತ ಕೇರಳಕ್ಕೆ ಮೊದಲ ಹಂತದಲ್ಲಿ ಬಿಡುಗಡೆ ಮಾಡಿರುವ ₹ 600 ಕೋಟಿ ಮುಂಗಡ ಪರಿಹಾರ ಮಾತ್ರ ಎಂದುಸ್ಪಷ್ಟನೆ ನೀಡಿರುವ ಕೇಂದ್ರ ಸರ್ಕಾರ, ಹೆಚ್ಚುವರಿ ಪರಿಹಾರವನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದೆ.
ಕೇರಳದಲ್ಲಿ ಉಂಟಾಗಿರುವ ನಷ್ಟದ ಅಂದಾಜು ಪಟ್ಟಿ ಸಿದ್ಧವಾದ ಬಳಿಕ ಹೆಚ್ಚುವರಿ ನೆರವು ನೀಡಲಾಗುವುದು ಎಂದು ಗೃಹ ಸಚಿವಾಲಯ ಶುಕ್ರವಾರ ಪ್ರಕಟಣೆ ಹೊರಡಿಸಿದೆ.
‘ಈಗಾಗಲೇ ಬಿಡುಗಡೆ ಮಾಡಿರುವ ₹ 600 ಕೋಟಿಮುಂಗಡ ಪರಿಹಾರ ಮಾತ್ರ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್‌ಡಿಆರ್‌ಎಫ್) ನಷ್ಟದ ಅಂದಾಜು ಮಾಡಿದ ಬಳಿಕ ಇನ್ನಷ್ಟು ನೆರವು ನೀಡಲಾಗುವುದು’ ಎಂದು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದೆ.
ಪ್ರವಾಹ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಯಾವುದೇ ನಿಯಮಾವಳಿಗಳಿಲ್ಲದೆ ತುರ್ತು ನೆರವು ಹಾಗೂ ಪರಿಹಾರ ಸಾಮಗ್ರಿಗಳನ್ನು ಒದಗಿಸಿದೆ ಎಂದೂ ಹೇಳಿದೆ.
ಇನ್ನಷ್ಟು ಸುದ್ದಿಗಳು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.