ಕಾಸರಗೋಡು(ಕೇರಳ) : ಕೊವಿಡ್-19 ಹಾಗೂ ಹಕ್ಕಿಜ್ವರ ಕಾಣಿಸಿಕೊಂಡ ಕಾರಣ ಇಲ್ಲಿನ ಸರ್ಕಾರಿ ಹಾಗೂ ಖಾಸಗಿ ಕಚೇರಿಗಳನ್ನು ಒಂದು ವಾರ ಕಾಲ ಬಂದ್ ಮಾಡುವಂತೆ ಸರ್ಕಾರ ಆದೇಶ ಹೊರಡಿಸಿದೆ.
ಕಾಸರಗೋಡಿನಲ್ಲಿ ಮಾರ್ಚ್ 21 ರಿಂದ ಒಂದು ವಾರ ಕಾಲ ಈ ಆದೇಶ ಜಾರಿಯಲ್ಲಿರುತ್ತದೆ. ಅಂಗಡಿ, ಮುಂಗಟ್ಟುಗಳು ಬೆಳಿಗ್ಗೆ 11 ರಿಂದ ಸಂಜೆ 5 ಗಂಟೆಯವರೆಗೆ ಮಾತ್ರ ತೆರೆದಿರುತ್ತವೆ ಎಂದುಕೇರಳ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಔಷಧಿ ಅಂಗಡಿಗಳು, ಹಾಲು, ವೈದ್ಯಕೀಯ ಸೇವೆಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ಆದೇಶ ಅನ್ವಯವಾಗುವುದಿಲ್ಲ.
ಕಾರಗೋಡಿನಲ್ಲಿ ಕೊರೊನಾ ಸೋಂಕಿತರು ಪತ್ತೆಯಾಗಿದ್ದರು. ಅಲ್ಲದೆ, ಹಕ್ಕಿ ಜ್ವರವೂ ಕಾಣಿಸಿಕೊಂಡು ಈ ಜಿಲ್ಲೆಯ ಜನರು ತೀವ್ರ ಆತಂಕಗೊಂಡಿದ್ದಾರೆ. ಇದರಿಂದಾಗಿ ರೋಗ ಹರಡುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೇರಳ ಸರ್ಕಾರ ತಿಳಿಸಿದೆ.
ಚಿತ್ರಮಂದಿರ, ಕ್ಲಬ್ ಎರಡು ವಾರ ಬಂದ್
ಹೆಚ್ಚು ಜನರು ಸೇರುವ ಧಾರ್ಮಿಕ ಕ್ಷೇತ್ರಗಳು, ಚಿತ್ರಮಂದಿರ, ಕ್ಲಬ್ ಸೇರಿದಂತೆ ಇನ್ನಿತರ ಸಾಮಾಜಿಕ ಕಾರ್ಯಕ್ರಮಗಳನ್ನು ಎರಡು ವಾರಗಳ ಕಾಲ ಬಂದ್ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.