ADVERTISEMENT

ಆನ್‌ಲೈನ್ ರಮ್ಮಿ ನಿಷೇಧ: ಸರ್ಕಾರದ ಆದೇಶ ರದ್ದುಪಡಿಸಿದ ಕೇರಳ ಹೈಕೋರ್ಟ್‌

ಪಿಟಿಐ
Published 27 ಸೆಪ್ಟೆಂಬರ್ 2021, 12:41 IST
Last Updated 27 ಸೆಪ್ಟೆಂಬರ್ 2021, 12:41 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಕೊಚ್ಚಿ: ಆನ್‌ಲೈನ್ ರಮ್ಮಿಯನ್ನು ನಿಷೇಧಿಸುವ ಕೇರಳ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್ ಸೋಮವಾರ ರದ್ದುಪಡಿಸಿದ್ದು, ಸರ್ಕಾರ ಹೇಳುವಂತೆ ಇದು ಜೂಜಾಟಕ್ಕೆ ಸಮನಾದುದು ಅಲ್ಲ ಎಂದು ಹೇಳಿದೆ.

ನ್ಯಾಯಮೂರ್ತಿ ಟಿ.ಆರ್. ರವಿ ಅವರು ಕೇರಳ ಸರ್ಕಾರದ ನಿರ್ಧಾರ ರದ್ದುಪಡಿಸಿದರು ಹಾಗೂ ಸರ್ಕಾರದ ಆದೇಶ ಅಸಾಂವಿಧಾನಿಕ ಎಂದು ಅಭಿಪ್ರಾಯಪಟ್ಟರು.

ಆನ್‌ಲೈನ್ ರಮ್ಮಿಯನ್ನು ನಿಷೇಧಿಸುವ ರಾಜ್ಯ ಸರ್ಕಾರದ ಅಧಿಸೂಚನೆಯ ವಿರುದ್ಧ ಹಲವು ಆನ್‌ಲೈನ್ ಗೇಮಿಂಗ್ ಕಂಪನಿಗಳು ಸಲ್ಲಿಸಿದ ಅರ್ಜಿಗಳನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಈ ತೀರ್ಪು ನೀಡಿದ್ದಾರೆ.

ADVERTISEMENT

ಆನ್‌ಲೈನ್ ರಮ್ಮಿ ಜೂಜಾಟಕ್ಕೆ ಸಮ. ಹೀಗಾಗಿ ಈ ಆಟವನ್ನು ನಿಷೇಧಿಸಲಾಗಿದೆ ಎಂದು ರಾಜ್ಯ ಸರ್ಕಾರ ಹೇಳಿತ್ತು. ಭೌತಿಕ ಸ್ವರೂಪದಕಾರ್ಡ್ ಆಟಕ್ಕೆ ಅನುಮತಿ ನೀಡಿರುವಾಗ ಆನ್‌ಲೈನ್ ರಮ್ಮಿ ಆಟ ಆಡುವುದನ್ನು ನಿಷೇಧಿಸುವುದು ಸರಿಯಲ್ಲ ಎಂದು ಗೇಮಿಂಗ್ ಕಂಪನಿಗಳು ವಾದಿಸಿದ್ದವು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.