ಲಖನೌ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಕೇರಳ ಪತ್ರಕರ್ತ ಸಿದ್ದಿಕ್ ಕಪ್ಪನ್ ಅವರಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ನೀಡಿದೆ. ಕಪ್ಪನ್ ಅವರು ಕಳೆದ ಎರಡು ವರ್ಷಗಳಿಂದ ಉತ್ತರ ಪ್ರದೇಶದ ಲಖನೌ ಜೈಲಿನಲ್ಲಿದ್ದಾರೆ.
ಶುಕ್ರವಾರವು ಹೈಕೋರ್ಟ್‌ನ ಪ್ರಸಕ್ತ ವರ್ಷದ ಕೊನೆಯ ಕೆಲಸದ ದಿನವಾಗಿದ್ದು, ಕನಿಷ್ಠ ಜನವರಿ 2ರ ವರೆಗೆ ಕಸ್ಟಡಿಯಲ್ಲೇ ಉಳಿಯಲಿದ್ದಾರೆ ಎನ್ನಲಾಗಿದೆ.
2020ರ ಅಕ್ಟೋಬರ್‌ನಲ್ಲಿ ಉತ್ತರ ಪ್ರದೇಶದ ಹಾಥರಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವರದಿಗಾರಿಕೆಗೆ ತೆರಳಿದ್ದ ವೇಳೆ ಕಪ್ಪನ್ ಅವರನ್ನು ಗಲಭೆ ಸೃಷ್ಟಿಸಲು ಸಂಚು ರೂಪಿಸಿದ ಆರೋಪ ಹೊರಿಸಿ ಬಂಧಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಕಳೆದ ಸೆಪ್ಟಂಬರ್‌ನಲ್ಲಿ ಕಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿತ್ತು. ಆದರೆ 2021ರಲ್ಲಿ ಜಾರಿ ನಿರ್ದೇಶನಾಲಯವು ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಜೈಲಿನಿಂದ ಬಿಡುಗಡೆ ಸಿಕ್ಕಿರಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.