ADVERTISEMENT

ಕೇರಳ ಭೂಕುಸಿತ: ವಯನಾಡು ಸೇರಿ ನೆರೆಯ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಿದ IMD

ಪಿಟಿಐ
Published 30 ಜುಲೈ 2024, 7:13 IST
Last Updated 30 ಜುಲೈ 2024, 7:13 IST
<div class="paragraphs"><p>ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ</p></div>

ರಕ್ಷಣಾ ಕಾರ್ಯಾಚರಣೆ ನಡೆಸುತ್ತಿರುವ ಎನ್‌ಡಿಆರ್‌ಎಫ್ ಸಿಬ್ಬಂದಿ

   

–ಪಿಟಿಐ ಚಿತ್ರ

ತಿರುವನಂತಪುರ: ಕೇರಳದ ವಯನಾಡು ಜಿಲ್ಲೆಯ ಮೆಪ್ಪಾಡುವಿನಲ್ಲಿ ನಿರಂತರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದೆ. ಈವರೆಗೆ 49 ಮಂದಿ ಮೃತಪಟ್ಟಿದ್ದು, ಇನ್ನೂ ಹಲವು ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ADVERTISEMENT

ವಯನಾಡು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ಮಲಪ್ಪುರಂ, ಕೋಯಿಕ್ಕೋಡ್ ಮತ್ತು ಕಣ್ಣೂರು ಜಿಲ್ಲೆಗಳಲ್ಲಿ ಇಂದು (ಮಂಗಳವಾರ) ‘ರೆಡ್ ಅಲರ್ಟ್’ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ತಿರುವನಂತಪುರ ಮತ್ತು ಕೊಲ್ಲಂ ಹೊರತುಪಡಿಸಿ ಪತ್ತನಂತಿಟ್ಟ, ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್ ಮತ್ತು ಕಾಸರಗೋಡು ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಲಪ್ಪುರಂ, ಕೋಝಿಕ್ಕೋಡ್, ವಯನಾಡು ಮತ್ತು ಕಣ್ಣೂರು ಜಿಲ್ಲೆಗಳಿಗೆ ಬುಧವಾರವೂ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಮುಂಡಕ್ಕಾಯ್‌, ಚೂರಲ್ಮಲಾ, ಅತ್ತಮಲಾ ಮತ್ತು ನೂಳಪ್ಪುಳ ಗ್ರಾಮಗಳು ಭೂ ಕುಸಿತದ ಪರಿಣಾಮ ಎದುರಿಸುತ್ತಿವೆ. ರಸ್ತೆ ಸಂಪರ್ಕ ಕಡಿತಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗೆ ವಾಯುಪಡೆಯ ಎರಡು ಹೆಲಿಕಾಪ್ಟರ್‌ಗಳನ್ನು ಬಳಸಲಾಗಿದೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಸೇರಿದಂತೆ ಜಿಲ್ಲಾಡಳಿತವೂ ಸ್ಥಳದಲ್ಲಿ ಬೀಡು ಬಿಟ್ಟಿದೆ.

ಭೂ ಕುಸಿತ ದುರಂತಕ್ಕೆ ಸಂಬಂಧಿಸಿ ಪ್ರಧಾನಿ ನರೇಂದ್ರ ಮೋದಿ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ನಾಯಕರು ಕೇರಳ ಸಿಎಂ ಪಿಣರಾಯಿ ವಿಜಯನ್ ಜೊತೆ ಮಾತನಾಡಿದ್ದಾರೆ. ಅಗತ್ಯ ನೆರವು ಒದಗಿಸುವುದಾಗಿ ನಾಯಕರು ಭರವಸೆ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.