ತಿರುವನಂತಪುರ: ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಬಂದಿದ್ದ ವ್ಯಕ್ತಿಯೊಬ್ಬರು ಆಸ್ಪತ್ರೆಯ ಲಿಫ್ಟ್‌ನಲ್ಲಿ ಸತತ ಎರಡು ದಿನಗಳ ಕಾಲ ಸಿಲುಕಿಕೊಂಡಿದ್ದ ಘಟನೆ ಕೇರಳದ ತಿರುವನಂತಪುರ ನಡೆದಿದೆ.
ಆಸ್ಪತ್ರೆಯ ಲಿಫ್ಟ್‌ನಲ್ಲಿ ಸಿಲುಕಿಕೊಂಡಿದ್ದ ವ್ಯಕ್ತಿಯನ್ನು ಇಂದು (ಸೋಮವಾರ) ಬೆಳಿಗ್ಗೆ ರಕ್ಷಣಾ ಕಾರ್ಯಾಚರಣೆ ನಡೆಸುವ ಮೂಲಕ ರಕ್ಷಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಕ್ಷಿಸಲಾದ ವ್ಯಕ್ತಿಯನ್ನು ಉಳ್ಳೂರು ನಿವಾಸಿ ರವೀಂದ್ರನ್ ನಾಯರ್ (59) ಎಂದು ಗುರುತಿಸಲಾಗಿದೆ.
ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನ ಒಪಿ ಬ್ಲಾಕ್‌ನ ಲಿಫ್ಟ್‌ನಲ್ಲಿ ಈ ಘಟನೆ ನಡೆದಿದೆ. ನಾಯರ್ ಆಸ್ಪತ್ರೆಯ ಮೇಲಿನ ಮಹಡಿಗೆ ಹೋಗಲು ಲಿಫ್ಟ್ ಹತ್ತಿದ್ದಾರೆ. ಈ ವೇಳೆ ಲಿಫ್ಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಪರಿಣಾಮ, ಲಿಫ್ಟ್ ಕೆಟ್ಟು ನಿಂತಿತ್ತು. ಸಹಾಯಕ್ಕಾಗಿ ನಾಯರ್ ಕೂಗಿದ್ದಾರೆ ಯಾರು ಸಹಾಯಕ್ಕೆ ಬರಲಿಲ್ಲ. ಅವರ ಫೋನ್ ಕೂಡ ಸ್ವಿಚ್ ಆಫ್ ಆಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಲಿಫ್ಟ್ ಕಾರ್ಯಾಚರಣೆಗೆ ಸಂಬಂಧಿಸಿದಂತೆ ನಿರ್ವಾಹಕರು ಪರಿಶೀಲನೆ ನಡೆಸಿದಾಗ ಈ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಡಿ ನಾಯರ್ ಕುಟುಂಬದವರು ದೂರು ದಾಖಲಿಸಿದ್ದರು.
ನಾಯರ್ ವೈದ್ಯಕೀಯ ತಪಾಸಣೆಗಾಗಿ ಆಸ್ಪತ್ರೆಗೆ ಭೇಟಿ ನೀಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.