ತಿರುವನಂತಪುರ: ಸಮಾಜ ಸುಧಾರಕ ನಾರಾಯಣ ಗುರು ಅವರ ಪ್ರತಿಮೆಯನ್ನು ಸಂಸತ್ತಿನ ಆವರಣದಲ್ಲಿ ಅಳವಡಿಸಬೇಕು ಎಂದು ರಾಜ್ಯಸಭೆ ಸದಸ್ಯ ಎ.ಎ. ರಹೀಮ್ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
ದೂರದೃಷ್ಟಿ ಹೊಂದಿದ್ದ ಸಮಾಜ ಸುಧಾರಕ, ತತ್ವಜ್ಞಾನಿ ಮತ್ತು ಆಧ್ಯಾತ್ಮಿಕ ವ್ಯಕ್ತಿಯಾಗಿದ್ದ ನಾರಾಯಣ ಗುರು ಅವರು ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ ಎಂದು ಕೇಂದ್ರದ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಬರೆದ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ನಾರಾಯಣ ಗುರು ಅವರ ತತ್ವ ಸಿದ್ಧಾಂತಗಳು ಲಕ್ಷಾಂತರ ಜನರಿಗೆ ಸ್ಫೂರ್ತಿಯಾಗಿದ್ದು, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ಆಧ್ಯಾತ್ಮಿಕತೆಯನ್ನು ಉತ್ತೇಜಿಸುತ್ತವೆ. ಹೀಗಾಗಿ ಸಂಸತ್ತಿನ ಆವರಣದಲ್ಲಿ ನಾರಾಯಣ ಗುರು ಅವರ ಪ್ರತಿಮೆ ಸ್ಥಾಪಿಸಬೇಕು. ಇದರಿಂದ ಅವರಿಗೆ ಗೌರವ ನೀಡಿದಂತಾಗುತ್ತದೆ ಎಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.