ಕೊಚ್ಚಿ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೊ ಮುಲ್ಲಕಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೇರಳ ಹೈಕೋರ್ಟ್ ಬುಧವಾರ ವಜಾಗೊಳಿಸಿದೆ.
ಅರ್ಜಿ ವಜಾಗೊಳಿಸಿರುವ ನ್ಯಾಯಮೂರ್ತಿ ರಾಜಾ ವಿಜಯರಾಘವನ್, ಆರೋಪಿಯು ಸಮಾಜದಲ್ಲಿ ಉನ್ನತ ಸ್ಥಾನ ಹೊಂದಿದ್ದು, ಜಾಮೀನು ನೀಡಿದರೆ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ. ಆರೋಪಿಯ ಬಂಧನದ ನಂತರವೂ ಪ್ರಕರಣ ಸಂಬಂಧ ತನಿಖೆ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.