ಕಲ್ಪಟ್ಟ: ಪ್ರವಾಹ ಪೀಡಿತ ವಯನಾಡ್ ಜಿಲ್ಲೆಯ ನಿರ್ವಾರಂ ಹೈಯರ್ ಸೆಕೆಂಡರಿ ಶಾಲೆಯಲ್ಲಿರುವ ಪುನರ್ವಸತಿ ಕೇಂದ್ರದಲ್ಲಿ ವಿಷಯುಕ್ತ ಆಹಾರ ಸೇವಿಸಿ 30 ಮಂದಿ ಅಸ್ವಸ್ಥರಾಗಿದ್ದಾರೆ. ಅಸ್ವಸ್ಥರಾಗಿರುವ ಜನರನ್ನು ಮಾನಂತವಾಡಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಲಯಾಳ ಮನೋರಮಾ ಪತ್ರಿಕೆವರದಿ ಮಾಡಿದೆ.
ಪ್ರಳಯ ಪೀಡಿತ ಪ್ರದೇಶಗಳಿಗೆ ನಾಳೆ ಭೇಟಿ ನೀಡಲಿದ್ದಾರೆ ಪಿಣರಾಯಿ
ತಿರುವನಂತಪುರಂ: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಮಂಗಳವಾರ ಭೇಟಿ ನೀಡಲಿದ್ದಾರೆ. ಭೂಕುಸಿತ ಮತ್ತು ಮಹಾಮಳೆಗೆ ಇಲ್ಲಿಯವರೆಗೆ76 ಮಂದಿ ಪ್ರಾಣ ಕಳೆದುಕೊಂಡಿದ್ದುನಾಪತ್ತೆಯಾದವರ ಸಂಖ್ಯೆ 58 ಆಗಿದೆ ಎಂದು ಸಿಎಂ ಕಚೇರಿ ಹೇಳಿದೆ.
ವಿವಿಧ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ವಿಡಿಯೊ ಸಂವಾದ ನಡೆಸಿ ರಾಜ್ಯದ ಸ್ಥಿತಿಗತಿಗಳ ಬಗ್ಗೆ ಅರಿತುಕೊಳ್ಳುತ್ತಿದ್ದರು ಪಿಣರಾಯಿ.ಕೇರಳದಲ್ಲಿ 1654 ಪುನರ್ವಸತಿ ಕೇಂದ್ರಗಳಿದ್ದು 2,87,585 ಮಂದಿ ಇಲ್ಲಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.