ಇಡುಕ್ಕಿ: ಕೇರಳದ ಇಡುಕ್ಕಿ ಜಿಲ್ಲೆಯ ರಾಜಮಲ ಎಂಬಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಸಾವಿಗೀಡಾದವರ ಸಂಖ್ಯೆ 48ಕ್ಕೇರಿದೆ.ಸೋಮವಾರ 5 ಮೃತದೇಹಗಳನ್ನು ಮಣ್ಣಿನಡಿಯಿಂದ ಹೊರತೆಗೆಯಲಾಗಿದೆ ಎಂದು ಕೇರಳ ಸರ್ಕಾರ ಹೇಳಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಜತೆಗೆ ರಾಜ್ಯ ಮತ್ತು ಸ್ಥಳೀಯ ಸಂಸ್ಥೆಗಳು ರಕ್ಷಣಾ ಕಾರ್ಯದಲ್ಲಿ ಕೈ ಜೋಡಿಸಿವೆ. ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ರಕ್ಷಣಾ ಕಾರ್ಯಕ್ಕೆ ಅಡಚಣೆಯುಂಟಾಗಿದೆ.
ಮುಂದುವರಿದ ಮಳೆ
ಕೇರಳದಲ್ಲಿ ಮಳೆ ಮುಂದುವರಿದಿದ್ದು ಆಲಪ್ಪುಳದ ಕುಟ್ಟನಾಡ್ ತಾಲ್ಲೂಕಿನಲ್ಲಿ ಪ್ರವಾಹ ಸ್ಥಿತಿ ಮುಂದುವರಿದಿದೆ. ಜಿಲ್ಲಾಡಳಿತವು 30 ನಿರಾಶ್ರಿತರ ಶಿಬಿರಗಳನ್ನು ಸಿದ್ಧಗೊಳಿಸಿದ್ದು, ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರನ್ನು ಲಾರಿ ಮತ್ತು ಟ್ರ್ಯಾಕ್ಟರ್ ಮೂಲಕ ಸುರಕ್ಷಿತ ಸ್ಥಳಗಳಿಗೆ ತಲುಪಿಸಲಾಗಿದೆ .
ಭಾರತೀಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ ಸೋಮವಾರ 20 ಸೆಮಿ ಮಳೆಯಾಗುವ ಸಾಧ್ಯತೆ ಇದ್ದು ಮಂಗಳವಾರ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ.
ಕಾಸರಗೋಡು, ಕಣ್ಣೂರ್, ವಯನಾಡ್, ಕೋಯಿಕ್ಕೋಡ್, ಮಲಪ್ಪುರಂ ಮತ್ತು ಆಲಪ್ಪುಳ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.