ಕೋಟಯಂ,ಕೇರಳ: ಕ್ರೈಸ್ತ ಸನ್ಯಾಸಿನಿ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಬಂಧನಕ್ಕೆ ಒಳಗಾಗಿರುವ ರೋಮನ್ ಕ್ಯಾಥೋಲಿಕ್ ಬಿಷಪ್ ಫ್ರಾಂಕೊ ಮುಲ್ಲಕಲ್ ನ್ಯಾಯಾಂಗ ಬಂಧನ ಅವಧಿಯನ್ನು ಈ ತಿಂಗಳ 20ರವರೆಗೆ ವಿಸ್ತರಿಸಿದೆ.
ಫ್ರಾಂಕೊ ನ್ಯಾಯಾಂಗ ಬಂಧನದ ಅವಧಿ ಶನಿವಾರ ಮುಕ್ತಾಯಗೊಂಡಿತ್ತು. ಇದರಿಂದ ಆರೋಪಿಯನ್ನು ಪೊಲೀಸರು ಪಾಲ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಲಯ ಬಂಧನ ಅವಧಿಯನ್ನು 14 ದಿನ ವಿಸ್ತರಿಸಿತು.
ಬಿಷಪ್ ಫ್ರಾಂಕೊ ಪರ ವಕೀಲರು ಹೈಕೋರ್ಟ್‌ಲ್ಲಿ ಜಾಮೀನು ಕೋರಿ ಮತ್ತೊಮ್ಮೆ ಅರ್ಜಿ ಸಲ್ಲಿಸಲು ನಿರ್ಧಾರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.