ತಿರುವನಂತಪುರ:ಕಳೆದ ಕೆಲವು ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆ ಶುಕ್ರವಾರ ಕೇರಳದ ದಕ್ಷಿಣ ಜಿಲ್ಲೆಗಳಲ್ಲಿ ಸ್ವಲ್ಪಮಟ್ಟಿಗೆ ತಗ್ಗಿದೆ. ಆದರೆ,ದಕ್ಷಿಣಕರ್ನಾಟಕ ಮತ್ತು ಉತ್ತರ ಕೇರಳ ಭಾಗದಲ್ಲಿ ಭಾರಿ ಮಳೆ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.
ಇದೇ ವೇಳೆ ಉತ್ತರ ಕೇರಳದಕಾಸರಗೋಡು, ಇಡುಕ್ಕಿ, ತ್ರಿಶೂರ್, ಪಾಲಕ್ಕಾಡ್, ಮಲಪ್ಪುರಂ, ಕೋಯಿಕೋಡ್, ವಯನಾಡು, ಕಣ್ಣೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿರುವ ಐಎಂಡಿ, ಈ ಎಂಟು ಜಿಲ್ಲೆಗಳಿಗೆ ಒಂದು ದಿನ ಮಟ್ಟಿಗೆ ಆರೆಂಜ್‌ಅಲರ್ಟ್ ಘೋಷಿಸಿದೆ.
ಜುಲೈ 31ರಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಕೇರಳದಾದ್ಯಂತ ಇದುವರೆಗೆ 19 ಜನರು ಸಾವನ್ನಪ್ಪಿದ್ದಾರೆ. ಹಲವು ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಮುಂದುವರಿಸಲಾಗಿದೆ. ರಾಜ್ಯದ ವಿವಿಧೆಡೆ ಗುರುವಾರ 4ರಿಂದ 11 ಸೆಂ.ಮೀ.ವರೆಗೂ ಮಳೆ ಸುರಿದಿದೆ.
ಭಾರಿ ಮಳೆಯಿಂದ ಭರ್ತಿಯಾಗಿರುವ ಮುಲ್ಲಪೆರಿಯಾರ್ ಜಲಾಶಯದ ಮೂರು ಗೇಟ್‌ಗಳನ್ನುಬೆಳಿಗ್ಗೆ 11.30ಕ್ಕೆ ತೆರೆದು ನೀರು ಹೊರ ಬಿಡಲಾಗುತ್ತಿದೆ ಎಂದುಕೇರಳ ಜಲಸಂಪನ್ಮೂಲ ಸಚಿವರಾದ ರೋಶಿ ಅಗಸ್ಟೀನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.