ತಿರುವನಂತಪುರ: ಮುಂದಿನ ಎರಡು ದಿನಗಳಲ್ಲಿ ಕೇರಳದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಭಾರತೀಯ ಹವಾಮಾನ ಇಲಾಖೆಯು(ಐಎಂಡಿ) ಕೆಲವು ಜಿಲ್ಲೆಗಳಿಗೆ ಶನಿವಾರ ರೆಡ್ ಅಲರ್ಟ್ ಘೋಷಿಸಿದೆ.
ಕೇರಳದ ಪಟ್ಟಣಂತಿಟ್ಟ ಮತ್ತು ಇಡುಕ್ಕಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಮೇ 19, 20ರಂದು ಎರಡೂ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದಿದೆ.
ಉಳಿದಂತೆ ತಿರುವನಂತಪುರ, ಕೊಲ್ಲಂ, ಅಲಪ್ಪುಳ ಮತ್ತು ಎರ್ನಾಕುಲಂ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೇ 21ರಂದು ಒಂಬತ್ತು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಅನ್ನು ಈಗಾಗಲೇ ಸೂಚಿಸಲಾಗಿದೆ. ಮೇ 19ರಿಂದ 22 ನಡುವೆ ರಾಜ್ಯದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.
ಪಟ್ಟಣಂತಿಟ್ಟ, ಇಡುಕ್ಕಿ ಮತ್ತು ಮಲಪ್ಪುರಂ ಜಿಲ್ಲೆಗಳಿಗೆ ಇಂದು(ಶನಿವಾರ) ಆರೆಂಜ್ ಅಲರ್ಟ್ ನೀಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.