ತಿರುವನಂತಪುರ: ಯುವ ಕಾಂಗ್ರೆಸ್ ಕೇರಳ ರಾಜ್ಯ ಘಟಕ ಅಧ್ಯಕ್ಷ ರಾಹುಲ್ ಮಾಂಕೂಟತ್ತಿಲ್ ಅವರ ಬಂಧನ ಖಂಡಿಸಿ ಇಲ್ಲಿನ ಸಚಿವಾಲಯದ ಮುಂದೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬುಧವಾರ ನಡೆಸಿದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ.
ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ರಾಹುಲ್ ಮಾಂಕೂಟತ್ತಿಲ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದರು. ಅವರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯವು, ನ್ಯಾಯಾಂಗ ಬಂಧನ ವಿಧಿಸಿದೆ.
ಪೊಲೀಸರು ಸ್ಥಾಪಿಸಿದ್ದ ಬ್ಯಾರಿಕೇಡ್‌ಗಳನ್ನು ಹತ್ತಲು ಯತ್ನಿಸಿದ ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಹಲವು ಬಾರಿ ಜಲಫಿರಂಗಿ ಪ್ರಯೋಗಿಸಿದ್ದಾರೆ.
ಸರ್ಕಾರ ಮತ್ತು ಪೊಲೀಸರ ವಿರುದ್ಧ ಘೋಷಣೆ ಕೂಗಿದ ಯುವ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ರಸ್ತೆಯಲ್ಲಿ ಕುಳಿತು ಪ್ರತಿಭಟನೆ ನಡೆಸಿದರು ಎಂದು ಮೂಲಗಳು ತಿಳಿಸಿವೆ.
ಪ್ರತಿಭಟನಾ ಮೆರವಣಿಗೆಯನ್ನು ಉದ್ಘಾಟಿಸಿ ಮಾತನಾಡಿದ ಶಾಸಕ ಶಾಫಿ ಪರಂಬಿಲ್, ‘ಪೊಲೀಸರು ಎಡ ಪಕ್ಷಗಳ ನಾಯಕರ ಸೇವಕರಂತೆ ವರ್ತಿಸುತ್ತಿದ್ದಾರೆ’ ಎಂದು ಆರೋಪಿಸಿದರು.
ರಾಹುಲ್ ಮಾಂಕೂಟತ್ತಿಲ್ ಬಂಧನ ಖಂಡಿಸಿ ಮಂಗಳವಾರ ರಾಜ್ಯದಾದ್ಯಂತ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.