ADVERTISEMENT

LS Polls | ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯಲ್ಲಿ ವಿಲೀನಗೊಂಡ ಕೇರಳ ಜನಪಕ್ಷಂ

ಪಿಟಿಐ
Published 31 ಜನವರಿ 2024, 10:34 IST
Last Updated 31 ಜನವರಿ 2024, 10:34 IST
<div class="paragraphs"><p>ಬಿಜೆಪಿಯೊಂದಿಗೆ ವಿಲೀನಗೊಂಡ ಕೇರಳ ಜನಪಕ್ಷಂ</p></div>

ಬಿಜೆಪಿಯೊಂದಿಗೆ ವಿಲೀನಗೊಂಡ ಕೇರಳ ಜನಪಕ್ಷಂ

   

ಎಎನ್‌ಐ ಸ್ಕ್ರೀನ್‌ಗ್ರ್ಯಾಬ್‌

ನವದೆಹಲಿ: ಲೋಕಸಭಾ ಚುನಾವಣೆಗೂ ಮುನ್ನ ಪಿ.ಸಿ.ಜಾರ್ಜ್ ನೇತೃತ್ವದ ಕೇರಳ ಜನಪಕ್ಷಂ(ಜಾತ್ಯತೀತ) ಬಿಜೆಪಿಯೊಂದಿಗೆ ವಿಲೀನಗೊಂಡಿದೆ.

ADVERTISEMENT

ಕೇಂದ್ರ ಸಚಿವ ಪ್ರಕಾಶ್‌ ಜಾವೇಡಕರ್ ಅವರ ಸಮ್ಮುಖದಲ್ಲಿ ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಿ.ಸಿ ಜಾರ್ಜ್, ಮಗ ಶಾನ್‌ ಮತ್ತು ಪಕ್ಷದ ಇತರ ಮುಖಂಡರೊಂದಿಗೆ ಬಿಜೆಪಿಗೆ ಸೇರಿದ್ದಾರೆ.

‘ಇಂದು ಪಿ. ಸಿ. ಜಾರ್ಜ್ ನೇತೃತ್ವದ ಕೇರಳ ಜನಪಕ್ಷಂ (ಜಾತ್ಯತೀತ) ಬಿಜೆಪಿಯೊಂದಿಗೆ ವಿಲೀನಗೊಂಡಿದೆ. 2047ರ ವೇಳೆಗೆ ಭಾರತವನ್ನು 'ವಿಕಸಿತ ಭಾರತ' ಆಗಿ ಪರಿವರ್ತಿಸುವ ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯಲ್ಲಿ ವಿಶ್ವಾಸವಿಟ್ಟು ಈ ನಿರ್ಧಾರ ತೆಗೆದುಕೊಂಡಿದೆ’ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನಿಲ್ ಆಂಟೋನಿ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ.

‘ಜನಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವ ಮೂಲಕ ಕೇರಳದಲ್ಲಿ ಐತಿಹಾಸಿಕ ಬದಲಾವಣೆಗೆ ಮುನ್ನುಡಿ ಹಾಡಿದ್ದೇವೆ. ರಾಜ್ಯದಲ್ಲಿ ಬಿಜೆಪಿ ಇನ್ನಷ್ಟು ಬೆಳೆಯಲು ಇದು ಸಹಕಾರಿಯಾಗಲಿದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.