ಅಹಮದಾಬಾದ್: ಖಾದಿಯು ಸ್ವಾತಂತ್ರ್ಯಾನಂತರ ನಿರ್ಲಕ್ಷಕ್ಕೊಳಗಾಗಿದೆ. ಆದರೆ, ಅದು ಇದೀಗ ಆತ್ಮನಿರ್ಭರ ಭಾರತದ ಸ್ಫೂರ್ತಿಯ ಮೂಲವಾಗಬಲ್ಲದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ.
ಸಾಬರಮತಿ ನದಿ ತೀರದಲ್ಲಿನಡೆದ 'ಖಾದಿ ಉತ್ಸವ'ದಲ್ಲಿ ಮೋದಿ ಮಾತನಾಡಿದರು.
ಸ್ವಾತಂತ್ರ್ಯಾನಂತರ ಖಾದಿಯನ್ನು ಕಡೆಗಣಿಸಲಾಗಿದೆ. ಹೀಗಾಗಿ ನೇಕಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ದೂರಿದ ಅವರು, ಖಾದಿ ಎಳೆಯು ಸ್ವಾತಂತ್ರ್ಯ ಹೋರಾಟಕ್ಕೆ ಸ್ಫೂರ್ತಿಯಾದಂತೆ ಇದೀಗ ದೇಶದ ಬೆಳವಣಿಗೆ ಮತ್ತು ಆತ್ಮನಿರ್ಭರ ಭಾರತಕ್ಕೂ ಸ್ಫೂರ್ತಿಯ ಸೆಲೆಯಾಗಬಲ್ಲದು ಎಂದು ಅಭಿಪ್ರಾಯಪಟ್ಟಿದ್ದಾರೆ.
ಮುಂದುವರಿದು,ಖಾದಿ ಉತ್ಸವದಲ್ಲಿ ಸುಮಾರು 7,500 ಮಹಿಳೆಯರು ಏಕಕಾಲಕ್ಕೆ ಚರಕದಲ್ಲಿ ನೂಲುವ ಮೂಲಕ ದಾಖಲೆ ಬರೆದಿದ್ದಾರೆ ಎಂದೂ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು.
'ಸ್ವಾತಂತ್ರ್ಯದ ಅಮೃತ ಮಹೋತ್ಸವ'ದ ಭಾಗವಾಗಿ ಈಉತ್ಸವವನ್ನು ಆಯೋಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.