ADVERTISEMENT

J&K Assembly Election: ಐದು ಗ್ಯಾರಂಟಿಗಳನ್ನು ಘೋಷಿಸಿದ ಮಲ್ಲಿಕಾರ್ಜುನ ಖರ್ಗೆ

ಪಿಟಿಐ
Published 11 ಸೆಪ್ಟೆಂಬರ್ 2024, 10:46 IST
Last Updated 11 ಸೆಪ್ಟೆಂಬರ್ 2024, 10:46 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ</p></div>

ಮಲ್ಲಿಕಾರ್ಜುನ ಖರ್ಗೆ

   

ಅನಂತನಾಗ್‌: ಜಮ್ಮು ಮತ್ತು ಕಾಶ್ಮೀರದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಮಹಿಳಾ ಉದ್ಯಮಿಗಳಿಗೆ ₹5 ಲಕ್ಷದವರೆಗೆ ಬಡ್ಡಿ ರಹಿತ ಸಾಲ ಸೇರಿದಂತೆ ಐದು ಗ್ಯಾರಂಟಿಗಳನ್ನು ನೀಡುವುದಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.

ದಕ್ಷಿಣ ಕಾಶ್ಮೀರದಲ್ಲಿ ಕಾಂಗ್ರೆಸ್‌ ಮತ್ತು ನ್ಯಾಷನಲ್‌ ಕಾನ್ಫರೆನ್ಸ್‌ ಮೈತ್ರಿ ಅಭ್ಯರ್ಥಿ ಪರ ಚುನಾವಣಾ ರ‍್ಯಾಲಿ ನಡೆಸಿದ ಖರ್ಗೆ, ‘ಮಹಿಳಾ ಉದ್ಯಮಿಗಳಿಗೆ ₹5 ಲಕ್ಷವರೆಗೆ ಬಡ್ಡಿ ರಹಿತ ಸಾಲ, ಪ್ರತಿ ಕುಟುಂಬಕ್ಕೆ  ₹25 ಲಕ್ಷದ ಆರೋಗ್ಯ ವಿಮೆ, ಕುಟುಂಬದ ಯಜಮಾನಿಗೆ ಮಾಸಿಕ ₹3,000 ಹಣ, ಸಾರ್ವಜನಿಕ ವಿತರಣಾ ವ್ಯವಸ್ಥೆಯ ಮೂಲಕ ಪ್ರತಿ ವ್ಯಕ್ತಿಗೆ 11 ಕೆಜಿ ಧಾನ್ಯಗಳನ್ನು ನೀಡುವ ಯೋಜನೆಯ ಮರುಜಾರಿ, ಮತ್ತು ಮನಮೋಹನ್‌ ಸಿಂಗ್‌ ಅವಧಿಯಲ್ಲಿ ಭರವಸೆ ನೀಡಿದಂತೆ ವಲಸೆ ಕಾಶ್ಮೀರಿ ಪಂಡಿತರಿಗೆ ಪುನರ್ವಸತಿ ಕಲ್ಪಿಸಲಾಗುವುದು’ ಎಂದು ಖರ್ಗೆ ಹೇಳಿದರು.

ADVERTISEMENT

ಇದಲ್ಲದೆ ಒಬಿಸಿ ಸಮುದಾಯದವರು ಕೂಡ ಸಂವಿಧಾನದಲ್ಲಿ ನಮೂದಿಸಿದಂತೆ ಹಕ್ಕುಗಳನ್ನು ಪಡೆಯಲಿದ್ದಾರೆ ಎಂದು ಖರ್ಗೆ ಭರವಸೆ ನೀಡಿದರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಒಂದು ಲಕ್ಷ ಉದ್ಯೋಗ ಅವಕಾಶಗಳಿವೆ. ಆದರೆ ಈಗಿನ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡುತ್ತಿಲ್ಲ. ಕಾಶ್ಮೀರದ ಜನ ಬಡವರಾಗಿಯೇ ಇರಬೇಕು ಎನ್ನುವುದು ಅವರ ಉದ್ದೇಶ ಎಂದು ವಾಗ್ದಾಳಿ ನಡೆಸಿದರು.

‘ನಾವು ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ. ಅವರು (ಕೇಂದ್ರ ಸರ್ಕಾರ) ಯಾವ ಕೈಗಾರಿಕೆಗಳನ್ನೂ ಕಾಶ್ಮೀರಕ್ಕೆ ಬರುವಂತೆ ಮಾಡಿಲ್ಲ. ಹೀಗಾಗಿ ಉದ್ಯೋಗ ಸೃಷ್ಟಿಯಾಗಿಲ್ಲ. ನಾವು ಪ್ರವಾಸೋದ್ಯಮ ಮತ್ತು ಉತ್ಪಾದನೆಗೆ ಹೆಚ್ಚು ಒತ್ತು ನೀಡಲಿದ್ದೇವೆ. ಕಳೆದ ಕೆಲವು ವರ್ಷಗಳಲ್ಲಿ 4,400ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳು ಬಂದ್‌ ಆಗಿವೆ. ಅವುಗಳು ಮತ್ತೆ ಬಾಗಿಲು ತೆರೆಯುಯವಂತೆ ಮಾಡುತ್ತೇವೆ’ ಎಂದರು.

ಎಲ್ಲಕ್ಕಿಂತ ಮುಖ್ಯವಾಗಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನವನ್ನು ಮರುಸ್ಥಾಪಿಸುತ್ತೇವೆ ಭರವಸೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.