ADVERTISEMENT

ವಿಧಾನಸಭೆ ಚುನಾವಣೆ ಪೂರ್ವ ತಯಾರಿ: ಜಮ್ಮು & ಕಾಶ್ಮೀರಕ್ಕೆ ಖರ್ಗೆ, ರಾಹುಲ್‌ ಭೇಟಿ

ಪಿಟಿಐ
Published 21 ಆಗಸ್ಟ್ 2024, 6:40 IST
Last Updated 21 ಆಗಸ್ಟ್ 2024, 6:40 IST
<div class="paragraphs"><p>ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ ಗಾಂಧಿ –ಪಿಟಿಐ ಚಿತ್ರ</p></div>

ಮಲ್ಲಿಕಾರ್ಜುನ ಖರ್ಗೆ ಮತ್ತು ರಾಹುಲ್‌ ಗಾಂಧಿ –ಪಿಟಿಐ ಚಿತ್ರ

   

ಜಮ್ಮು: ವಿಧಾನಸಭೆ ಚುನಾವಣೆ ಹಿನ್ನೆಲೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಜಮ್ಮು ಕಾಶ್ಮೀರಕ್ಕೆ ಎರಡು ದಿನಗಳ ಪ್ರವಾಸ ಕೈಗೊಂಡಿದ್ದಾರೆ.

ಇಂದು ಶ್ರೀನಗರಕ್ಕೆ ತೆರಳುವ ಕೈ ನಾಯಕರು ಬಳಿಕ ಜಮ್ಮುವಿಗೆ ಭೇಟಿ ನೀಡಿ ಪ್ರಮುಖ ಸಭೆಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಮ್‌ ಅಹಮದ್‌ ಮಿರ್‌ ಪಿಟಿಐಗೆ ತಿಳಿಸಿದ್ದಾರೆ.

ADVERTISEMENT

ಶ್ರೀನಗರದಲ್ಲಿ ಪಕ್ಷದ ನಾಯಕರು ಮತ್ತು 10 ಜಿಲ್ಲೆಗಳ ಕಾರ್ಯಕರ್ತರೊಂದಿಗೆ ಸಭೆ ನಡೆಸಲಿದ್ದಾರೆ. ಜಮ್ಮುವಿನಲ್ಲಿಯೂ ಆ ಪ್ರದೇಶದ 10 ಜಿಲ್ಲೆಗಳ ಕಾರ್ಯಕರ್ತರೊಂದಿಗೆ ಚುನಾವಣಾ ತಯಾರಿಗೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಮಾಹಿತಿಯನ್ನು ಕಲೆಹಾಕಲಿದ್ದಾರೆ ಎಂದು ಮಿರ್‌ ಮಾಹಿತಿ ನೀಡಿದ್ದಾರೆ.

90 ಸದಸ್ಯ ಬಲದ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು ಮೊದಲ ಹಂತದ ಮತದಾನ ಸೆ. 18ರಂದು ಆರಂಭವಾಗಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.