ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದ್ದು, ಮಲ್ಲಿಕಾರ್ಜುನ ಖರ್ಗೆ ಮತ್ತು ಶಶಿ ತರೂರ್ ಅವರಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಕಾಂಗ್ರೆಸ್ ಪಕ್ಷದ 137 ವರ್ಷಗಳ ಇತಿಹಾಸದಲ್ಲಿ ಆರನೇ ಬಾರಿ ಚುನಾವಣೆ ನಡೆದಿದೆ. ಹಾಗೆಯೇ 22 ವರ್ಷಗಳ ಬಳಿಕ ನೆಹರೂ-ಗಾಂಧಿ ಕುಟುಂಬದ ಹೊರಗಿನ ವ್ಯಕ್ತಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ.
ಇದನ್ನೂ ಓದಿ:ಎಐಸಿಸಿ ಚುನಾವಣೆ: ರಾಜ್ಯದಲ್ಲಿ 501 ಮತ ಚಲಾವಣೆ
ನವದೆಹಲಿಯ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಇಂದು ಬೆಳಿಗ್ಗೆ 10 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮಲ್ಲಿಕಾರ್ಜುನ ಖರ್ಗೆ ಅವರು ಗೆಲ್ಲುವ ಸಾಧ್ಯತೆ ಹೆಚ್ಚು ಎನ್ನಲಾಗಿದೆ.
ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಶೇ 96ರಷ್ಟು ಮತದಾನವಾಗಿತ್ತು. 9,915 ಪ್ರತಿನಿಧಿಗಳ ಪೈಕಿ 9,500 ಪ್ರತಿನಿಧಿಗಳು ತಮ್ಮ ಹಕ್ಕು ಚಲಾಯಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.