ಜಮ್ಮು : ಭಯೋತ್ಪಾದಕರ ದಾಳಿಯಲ್ಲಿ ಭಾನುವಾರ ಸೇನಾಧಿಕಾರಿಯೊಬ್ಬರು ಮೃತಪಟ್ಟ ಬೆನ್ನಲ್ಲೇ, ಉಗ್ರರ ನಿರ್ಮೂಲನೆಗಾಗಿ ಭದ್ರತಾ ಪಡೆಗಳು ಜಮ್ಮು– ಕಾಶ್ಮೀರದ ಕಿಶ್ತವಾಡ ಜಿಲ್ಲೆಯ ಕೇಶ್ವಾನ್ ದಟ್ಟ ಅಡವಿಯಲ್ಲಿ ಸೋಮವಾರ ಶೋಧ ನಡೆಸಿದವು.
ಗ್ರಾಮ ರಕ್ಷಣಾ ಕಾವಲುಗಾರರಿಬ್ಬರನ್ನು ಕಳೆದ ಗುರುವಾರ ಅಪಹರಿಸಿ ಹತ್ಯೆ ಮಾಡಿದ ಭಯೋತ್ಪಾದಕರಿಗಾಗಿ ಭದ್ರತಾ ಸಿಬ್ಬಂದಿಯು ನಾಲ್ಕು ದಿನಗಳಿಂದ ಅರಣ್ಯದಲ್ಲಿ ಶೋಧ ನಡೆಸುತ್ತಿದ್ದಾರೆ.
ಕೇಶ್ವಾನ್ ಅರಣ್ಯ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಶೋಧ ನಡೆಸುವಾಗ ಉಗ್ರರೊಂದಿಗೆ ನಡೆದ ಗುಂಡಿನ ಚಕಮಕಿ ಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ (ಜೆಸಿಒ) ನಾಯಬ್ ಸುಬೇದಾರ್ ರಾಕೇಶ್ ಕುಮಾರ್ ಹುತಾತ್ಮರಾಗಿದ್ದು ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸೇನಾಧಿಕಾರಿಯನ್ನು ಕೊಂದ ಮೂರ್ನಾಲ್ಕು ಉಗ್ರರು ಅರಣ್ಯದೊಳಗೆ ಅವಿತಿದ್ದು, ಅವರನ್ನು ಸದೆಬಡಿಯಲು ಕಾರ್ಯಾಚರಣೆ ಮುಂದುವರಿದಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.