ಕೋಲ್ಕತ್ತ: ನಗರದ ಎಸ್‌ಎಸ್‌ಕೆಎಂ ಆಸ್ಪತ್ರೆಯಲ್ಲಿ ಶನಿವಾರ ಕರ್ತವ್ಯನಿರತ ಕೋಲ್ಕತ್ತದ ಸಬ್ ಇನ್‌ಸ್ಪೆಕ್ಟರ್ ಒಬ್ಬರಿಗೆ, ಅವರ ರಿವಾಲ್ವರ್‌ನ ಗುಂಡೇ ತಗುಲಿದೆ. ಇದರಿಂದ ಅವರು ಗಾಯಗೊಂಡಿದ್ದಾರೆ.
ಘಟನೆ ಕುರಿತು ತನಿಖೆ ನಡೆಯುತ್ತಿದೆ. ಆಸ್ಪತ್ರೆಯ ಸಿಸಿಟಿವಿ ಕ್ಯಾಮೆರಾದ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ‘ಇದು ತಪ್ಪಾಗಿ ರಿವಾಲ್ವಾರ್‌ನಿಂದ ಗುಂಡು ಹಾರಿದೆಯೋ ಅಥವಾ ಪೊಲೀಸ್ ಅಧಿಕಾರಿಯೇ ಆತ್ಮಹತ್ಯೆಗೆ ಯತ್ನಿಸಿದ್ದಾರೋ‘ ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡಿರುವ ಪೊಲೀಸ್ ಅಧಿಕಾರಿ ಈ ಹಿಂದೆ ಇದೇ ಆಸ್ಪತ್ರೆಯ ತೀವ್ರ ನಿಗಾ ಘಕಟದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.