ADVERTISEMENT

ಕೋಲ್ಕತ್ತ ವೈದ್ಯರ ಪ್ರತಿಭಟನೆಯಿಂದ 23 ಮಂದಿ ಸಾವು: ಸುಪ್ರೀಂ ಕೋರ್ಟ್‌ಗೆ ವರದಿ

ಪಿಟಿಐ
Published 9 ಸೆಪ್ಟೆಂಬರ್ 2024, 9:44 IST
Last Updated 9 ಸೆಪ್ಟೆಂಬರ್ 2024, 9:44 IST
ಸುಪ್ರೀಂ ಕೋರ್ಟ್‌ 
ಸುಪ್ರೀಂ ಕೋರ್ಟ್‌    

ನವದೆಹಲಿ: ಕೋಲ್ಕತ್ತದ ಆರ್‌.ಜಿ. ಕರ್‌ ಆಸ್ಪತ್ರೆಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಖಂಡಿಸಿ ವೈದ್ಯರು ಪ್ರತಿಭಟನೆ ನಡೆಸಿದ್ದರಿಂದ ಸೂಕ್ತ ಚಿಕಿತ್ಸೆ ಸಿಗದೆ 23 ಮಂದಿ ಸಾವಿಗೀಡಾಗಿದ್ದಾರೆ ಎಂದು ಪಶ್ಚಿಮ ಬಂಗಾಳ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ ವರದಿಯಲ್ಲಿ ಹೇಳಿದೆ.

ಆರೋಗ್ಯ ಇಲಾಖೆಯ ವರದಿಯನ್ನು ಪಶ್ಚಿಮ ಬಂಗಾಳ ಸರ್ಕಾರದ ಪರ ವಕೀಲ ಕಪಿಲ್ ಸಿಬಲ್ ಅವರು, ಮುಖ್ಯನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಪೀಠಕ್ಕೆ ಸಲ್ಲಿಸಿದರು.

‘ಸ್ಥಿತಿಗತಿ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯ ಆರೋಗ್ಯ ಇಲಾಖೆ ವರದಿ ಸಲ್ಲಿಸಿದೆ. ವೈದ್ಯರ ಮುಷ್ಕರದಿಂದಾಗಿ 23 ಮಂದಿ ಸಾವಿಗೀಡಾಗಿದ್ದಾರೆ’ ಎಂದು ನ್ಯಾಯಮೂರ್ತಿಗಳಾದ ಜೆ.ಬಿ ಪರ್ದೀವಾಲ ಹಾಗೂ ಮನೋಜ್ ಮಿಶ್ರಾ ಅವರಿದ್ದ ಪೀಠದ ಮುಂದೆ ಅರುಹಿದರು.

ADVERTISEMENT

ಈ ಹಿಂದೆ ಆಗಸ್ಟ್ 22ರಂದು ವೈದ್ಯಕೀಯ ವಿದ್ಯಾರ್ಥಿಯ ಸಾವಿನ ಬಳಿಕ ದೂರು ದಾಖಲಿಸಿಕೊಳ್ಳುವುದಕ್ಕೆ ವಿಳಂಬ ಮಾಡಿದ ಕೋಲ್ಕತ್ತ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಇದು ಮನಸ್ಸನ್ನು ಕದಡುವ ಘಟನೆ ಎಂದು ಹೇಳಿತ್ತು. ಅಲ್ಲದೆ ಘಟನೆಗಳ ಅನುಕ್ರಮ ಮತ್ತು ಅದರ ಕಾರ್ಯವಿಧಾನದ ಔಪಚಾರಿಕತೆಗಳ ಸಮಯವನ್ನು ಪ್ರಶ್ನಿಸಿತ್ತು.

ಮಹಿಳಾ ವೈದ್ಯರ ಹಾಗೂ ಆರೋಗ್ಯಕರ್ತರ ಭದ್ರತೆಗೆ ಪಾಲಿಸಬೇಕಾದ ಶಿಷ್ಟಾಚಾರ ಕ್ರಮಗಳ ರೂಪಿಸಲು 10 ಸದಸ್ಯರ ರಾಷ್ಟ್ರೀಯ ಟಾಸ್ಕ್ ಫೋರ್ಸ್‌ ಅನ್ನೂ ಸುಪ್ರೀಂ ಕೋರ್ಟ್ ರಚಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.