ಲಖನೌ: ಪಶ್ಚಿಮ ಬಂಗಾಳದ ಆರ್.ಜಿ. ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಖಂಡಿಸಿ ಉತ್ತರ ಪ್ರದೇಶದ ವೈದ್ಯಕೀಯ ವಿದ್ಯಾರ್ಥಿಗಳು ಸೋಮವಾರ ‘ಕಾಲಾ(ಕರಾಳ) ರಕ್ಷಾ ಬಂಧನ’ ಆಚರಿಸಿದರು.
ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಹಲವು ರಾಜ್ಯಗಳಲ್ಲಿ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದು, ಹೊರರೋಗಿ ವಿಭಾಗ(ಒಪಿಡಿ) ಸೇರಿದಂತೆ ವೈದ್ಯಕೀಯ ಸೇವೆ ನೀಡುತ್ತಿಲ್ಲ. ತುರ್ತು ವೈದ್ಯಕೀಯ ಸೇವೆ ಮಾತ್ರ ಲಭ್ಯವಿದೆ. ಪ್ರತಿಭಟನೆಯು ಸೋಮವಾರ ಎಂಟನೇ ದಿನಕ್ಕೆ ಕಾಲಿಟ್ಟಿದ್ದು, ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಮುಂದುವರಿದಿದೆ.
ಉತ್ತರ ಪ್ರದೇಶ ಕಾರ್ಯನಿರತ ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಹರಿದೀಪ್ ಜೋಗಿ ಪ್ರತಿಕ್ರಿಯಿಸಿ ‘ವೈದ್ಯಕೀಯ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಕಿರಿಯ ವೈದ್ಯರ ಸುರಕ್ಷತೆಗೆ ಕ್ರಮ ಕೈಗೊಳ್ಳುವಂತೆ ವೈದ್ಯಕೀಯ ಸಂಘವು ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಿದೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.