ADVERTISEMENT

ಆರ್.ಜಿ ಕರ್‌ ಪ್ರಕರಣ: 13ನೇ ದಿನಕ್ಕೆ ಕಾಲಿಟ್ಟ ಕಿರಿಯ ವೈದ್ಯರ ಅಮರಣಾಂತ ಉಪವಾಸ

ಪಿಟಿಐ
Published 17 ಅಕ್ಟೋಬರ್ 2024, 8:02 IST
Last Updated 17 ಅಕ್ಟೋಬರ್ 2024, 8:02 IST
<div class="paragraphs"><p>ಅತ್ಯಾಚಾರ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ</p></div>

ಅತ್ಯಾಚಾರ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ

   

– ಪಿಟಿಐ ಚಿತ್ರ

ಕೋಲ್ಕತ್ತ: ವೈದ್ಯಕೀಯ ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ ಸಂತ್ರಸ್ತೆಗೆ ನ್ಯಾಯ ಒದಗಿಸಬೇಕು ಎಂದು ಕೋಲ್ಕತ್ತದ ಆರ್‌.ಜಿ ಕರ್‌ ಆಸ್ಪತ್ರೆಯ ಕಿರಿಯ ವೈದ್ಯರು ನಡೆಸುತ್ತಿರುವ ಅಮರಣಾಂತ ಉಪವಾಸ ಗುರುವಾರ 13ನೇ ದಿನಕ್ಕೆ ಕಾಲಿಟ್ಟಿದೆ.

ADVERTISEMENT

ಉಪವಾಸದಿಂದಾಗಿ 6 ಮಂದಿ ಕಿರಿಯ ವೈದ್ಯರು ಅನಾರೋಗ್ಯಕ್ಕೀಡಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಾ. ಸುವೇಂದು ಮಲ್ಲಿಕ್ ತಿಳಿಸಿದ್ದಾರೆ.

ಸದ್ಯ ಪ್ರತಿಭಟನಾ ಸ್ಥಳದಲ್ಲಿ ಎಂಟು ವೈದ್ಯರು ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಿದ್ದಾರೆ. ಪ್ರತಿಭಟನೆ ನಡೆಸುತ್ತಿರುವ ವೈದ್ಯರು ರಾಜ್ಯ ಆರೋಗ್ಯ ಕಾರ್ಯದರ್ಶಿ ಎನ್‌.ಎಸ್ ನಿಗಮ್ ಅವರನ್ನು ತಕ್ಷಣವೇ ವಜಾಗೊಳಿಸುವಂತೆ ಒತ್ತಾಯಿಸುತ್ತಿದ್ದಾರೆ.

ರಾಜ್ಯದ ಎಲ್ಲಾ ಆಸ್ಪತ್ರೆಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಕೇಂದ್ರೀಕೃತ ರೆಫರಲ್ ವ್ಯವಸ್ಥೆಯನ್ನು ಸ್ಥಾಪಿಸುವುದು, ಹಾಸಿಗೆ ಖಾಲಿ ಮಾಹಿತಿ ವ್ಯವಸ್ಥೆಯನ್ನು ಜಾರಿಗೊಳಿಸುವುದು ಮತ್ತು ಅವರ ಕೆಲಸದ ಸ್ಥಳಗಳಲ್ಲಿ ಸಿಸಿಟಿವಿ, ಆನ್-ಕಾಲ್ ಕೊಠಡಿಗಳು ಮತ್ತು ಶೌಚಾಲಯಗಳು ಸೇರಿ ಅಗತ್ಯ ಸೌಲಭ್ಯಗಳನ್ನು ಖಚಿತಪಡಿಸಲು ಕಾರ್ಯಪಡೆಗಳನ್ನು ರಚಿಸುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದ್ದಾರೆ.

ಆಸ್ಪತ್ರೆಗಳಲ್ಲಿ ಹೆಚ್ಚಿನ ಪೊಲೀಸ್ ರಕ್ಷಣೆ, ಶಾಶ್ವತ ಮಹಿಳಾ ಪೊಲೀಸ್ ನೇಮಕಾತಿ ಮತ್ತು ವೈದ್ಯರು, ನರ್ಸ್‌ಗಳು ಮತ್ತು ಇತರ ಆರೋಗ್ಯ ಕಾರ್ಯಕರ್ತರ ಖಾಲಿ ಹುದ್ದೆಗಳನ್ನು ಶೀಘ್ರವಾಗಿ ಭರ್ತಿ ಮಾಡುವಂತೆಯೂ ಅವರು ಆಗ್ರಹಿಸುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.