ADVERTISEMENT

ಭೀಮಾ ಕೋರೆಗಾಂವ್‌ ಪ್ರಕರಣ: ಹಿಂದೆ ಸರಿದ ಸಿಜೆಐ

ಪಿಟಿಐ
Published 30 ಸೆಪ್ಟೆಂಬರ್ 2019, 20:00 IST
Last Updated 30 ಸೆಪ್ಟೆಂಬರ್ 2019, 20:00 IST
ರಂಜನ್ ಗೊಗೊಯಿ
ರಂಜನ್ ಗೊಗೊಯಿ   

ನವದೆಹಲಿ: ಭೀಮಾ ಕೋರೆಗಾಂವ್‌ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ ಗೌತಮ್‌ ನವಲಖಾ ಅವರು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ಹಿಂದೆ ಸರಿದಿದ್ದಾರೆ.

ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ರಂಜನ್‌ ಗೊಗೊಯಿ, ಎಸ್‌.ಎ. ಬೊಬ್ದೆ ಹಾಗೂ ಎಸ್‌. ಅಬ್ದುಲ್‌ ನಜೀರ್‌ ಅವರ ಪೀಠದ ಮುಂದೆ ತರಲಾಗಿತ್ತು. ಇದರಿಂದ ಗೊಗೊಯಿ ಅವರು ಹಿಂದೆ ಸರಿದಿದ್ದು, ಪ್ರಕರಣವನ್ನು ‘ನಾನು ಸದಸ್ಯನಾಗಿರದ ಪೀಠದ ಮುಂದೆ ತನ್ನಿರಿ’ ಎಂದು ಅಧಿಕಾರಿಗೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT