ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಕುರಿತಂತೆ ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದಲ್ಲಿ ರಚನೆಯಾಗಿರುವ ಸಮಿತಿಯು ಈವರೆಗೆ ಸಾರ್ವಜನಿಕರಿಂದ 5,000ಕ್ಕೂ ಹೆಚ್ಚು ಸಲಹೆಗಳನ್ನು ಸ್ವೀಕರಿಸಿದೆ ಎಂದು ಮೂಲಗಳು ಬುಧವಾರ ತಿಳಿಸಿವೆ.
ಸಮಿತಿಯು ಕಳೆದ ವಾರ, ದೇಶದಲ್ಲಿ ಏಕಕಾಲಕ್ಕೆ ಚುನಾವಣೆ ನಡೆಸುವ ಕುರಿತಂತೆ ಸಾರ್ವಜನಿಕರಿಂದ ಸಲಹೆಗಳನ್ನು ಆಹ್ವಾನಿಸಿತ್ತು.
ಜನವರಿ 15ರವರೆಗೆ ಸಲ್ಲಿಕೆಯಾಗುವ ಸಲಹೆಗಳನ್ನು ಪರಿಗಣಿಸಲಾಗುವುದು ಎಂದು ಸಮಿತಿಯು ಹೇಳಿಕೆಯಲ್ಲಿ ತಿಳಿಸಿದೆ.
ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸಮಿತಿ ರಚನೆಯಾಗಿದ್ದು, ಈವರೆಗೆ ಎರಡು ಸಭೆಗಳನ್ನು ನಡೆಸಿದೆ. ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ತಮ್ಮ ಅಭಿಪ್ರಾಯಗಳನ್ನು ತಿಳಿಸುವಂತೆ ಸಮಿತಿಯು ರಾಜಕೀಯ ಪಕ್ಷಗಳಿಗೆ ಇತ್ತೀಚೆಗೆ ಪತ್ರ ಬರೆದಿತ್ತು.
ಆರು ರಾಷ್ಟ್ರೀಯ ಪಕ್ಷಗಳು, 33 ಪ್ರಾದೇಶಿಕ ಪಕ್ಷಗಳು ಹಾಗೂ ಗುರುತಿಸಲಾಗದ ಏಳು ನೋಂದಾಯಿತ ಪಕ್ಷಗಳಿಗೆ ಸಮಿತಿ ಪತ್ರ ಬರೆದಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.