ಮಥುರಾ: ಶ್ರೀಕೃಷ್ಣ ಜನ್ಮಭೂಮಿ ಮಥುರಾದ ಕೇಶವದೇವ ದೇವಸ್ಥಾನಕ್ಕೆ ಸೇರಿದ ಭೂಮಿಯಲ್ಲಿ ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತಿರುವ ಶಾಹಿ ಈದ್ಗಾ ಮಸೀದಿಯನ್ನು ತೆರವುಗೊಳಿಸಲು ಕೋರಿ ಸಲ್ಲಿಸಲಾದ ಅರ್ಜಿಯ ವಿಚಾರಣೆಗೆ ಇಲ್ಲಿನ ನ್ಯಾಯಾಲಯ ಗುರುವಾರ ಸಮ್ಮತಿಸಿದೆ ಎಂದು ಅರ್ಜಿದಾರರ ಪರ ವಕೀಲರು ಹೇಳಿದ್ದಾರೆ.
ಈ ವಿಷಯಕ್ಕೆ ಸಂಬಂಧಿಸಿದ ಹಲವು ಮನವಿಗಳ ಪೈಕಿ ಒಂದನ್ನು ನ್ಯಾಯಾಲಯ ಅಂಗೀಕರಿಸಿದೆ ಎಂದು ಹರಿಶಂಕರ್ ಜೈನ್ ಹೇಳಿದರು.
ಕೃಷ್ಣ ಜನ್ಮಭೂಮಿ ಸಂಕೀರ್ಣವು 13.37 ಎಕರೆಗಳ ಪ್ರದೇಶದಲ್ಲಿದೆ.
ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಮಸೀದಿ ನಿರ್ಮಿಸಲಾಗಿದೆ ಎಂದು ಅರ್ಜಿದಾರರು ಪ್ರತಿಪಾದಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.