ADVERTISEMENT

ಕೃಷ್ಣಾ ನ್ಯಾಯಮಂಡಳಿ ಅವಧಿ ವಿಸ್ತರಣೆ

​ಪ್ರಜಾವಾಣಿ ವಾರ್ತೆ
Published 13 ಜುಲೈ 2023, 14:28 IST
Last Updated 13 ಜುಲೈ 2023, 14:28 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ನವದೆಹಲಿ: ತೆಲಂಗಾಣ ಹಾಗೂ ಆಂಧ್ರ ಪ್ರದೇಶದ ನಡುವಣ ನೀರು ಹಂಚಿಕೆ ವಿವಾದವನ್ನು  ಪರಿಶೀಲಿಸುತ್ತಿರುವ ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ಅಧಿಕಾರ ಅವಧಿಯನ್ನು ಕೇಂದ್ರ ಜಲಶಕ್ತಿ ಸಚಿವಾಲಯವು 2024ರ ಮಾರ್ಚ್‌ 31ರ ವರೆಗೆ ವಿಸ್ತರಿಸಿದೆ. 

ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶದ ನಡುವಣ ನೀರು ಹಂಚಿಕೆ ವಿವಾದಗಳ ಮಧ್ಯಸ್ಥಿಕೆ ವಹಿಸಲು 2004ರಲ್ಲಿ ರಚಿಸಲಾದ ನ್ಯಾಯಮಂಡಳಿ ಪ್ರಸ್ತುತ ತೆಲಂಗಾಣ ಮತ್ತು ಆಂಧ್ರಪ್ರದೇಶಕ್ಕೆ ಸಂಬಂಧಿಸಿದ ವಿಷಯಗಳ ವಿವಾದಗಳನ್ನು ಆಲಿಸುತ್ತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT