ನವದೆಹಲಿ: ಸಂಸತ್ತಿನಲ್ಲಿ ಎನ್‌ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರೊಂದಿಗಿನಇತ್ತೀಚಿನಸಂಭಾಷಣೆ ಕುರಿತುಕಾಂಗ್ರೆಸ್ ಸಂಸದ ಶಶಿ ತರೂರ್ ಪ್ರತಿಕ್ರಿಯಿಸಿದ್ದಾರೆ.
ಲೋಕಸಭೆ ಕಲಾಪದ ವೇಳೆ ಸುಪ್ರಿಯಾ ಸುಳೆ ಅವರೊಂದಿಗೆ ತರೂರ್ ಸಂಭಾಷಣೆ ನಡೆಸುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.
ಈ ಕುರಿತು ಟ್ವೀಟ್ ಮಾಡಿರುವ ತರೂರ್, ‘ವಿಡಿಯೊ ನೋಡಿ ಆನಂದಿಸುತ್ತಿರುವ ಎಲ್ಲರಿಗೂ ಸ್ಪಷ್ಟನೆ ನೀಡಲು ಬಯಸುತ್ತೇನೆ. ಲೋಕಸಭೆಯಲ್ಲಿ ಸುಪ್ರಿಯಾ, ನನ್ನ ಬಳಿ ಪ್ರಶ್ನೆಯೊಂದನ್ನು ಕೇಳುತ್ತಿದ್ದರು. ಏಕೆಂದರೆ ಫಾರೂಕ್ ಅಬ್ದುಲ್ಲಾ ಮಾತುಕತೆ ಮುಗಿದ ಬಳಿಕ ಆಕೆ ಮಾತನಾಡಲಿದ್ದರು. ಫಾರೂಕ್ ಅವರಿಗೆ ತೊಂದರೆಯಾಗದಂತೆ ಸುಪ್ರಿಯಾ ಮೃದುವಾಗಿ ಮಾತನಾಡುತ್ತಿದ್ದರು. ಅವರ ಮಾತುಗಳನ್ನು ಕೇಳಿಸಿಕೊಳ್ಳಲು ನಾನು ಡೆಸ್ಕ್ ಮೇಲೆ ಒರಗಿದೆ’ ಎಂದು ಬರೆದುಕೊಂಡಿದ್ದಾರೆ.
ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರು ಎದ್ದು ನಿಂತು, ಸದನವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಆದರೆ, ಅವರ ಹಿಂದೆ ಕುಳಿತಿದ್ದ ಶಶಿ ತರೂರ್, ಸಂಸದೆ ಸುಪ್ರಿಯಾ ಸುಳೆ ಅವರೊಂದಿಗೆ ಮಾತುಕತೆಯಲ್ಲಿಮಗ್ನರಾಗಿದ್ದರು. ಇದನ್ನು ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.