ನವದೆಹಲಿ: ಕೊಲೆ ಯತ್ನ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ಲಕ್ಷದ್ವೀಪದ ಸಂಸದ ಮೊಹಮ್ಮದ್ ಫೈಜಲ್ ಅವರನ್ನು ಅನರ್ಹಗೊಳಿಸಿ ಲೋಕಸಭೆ ಸಚಿವಾಲಯ ಅಧಿಸೂಚನೆ ಹೊರಡಿಸಿದೆ.
ಕವರತ್ತಿ ಸೆಷನ್ಸ್ ನ್ಯಾಯಾಲಯವು ಜನವರಿ 11ರಂದು ಶಿಕ್ಷೆ ವಿಧಿಸಿದ ದಿನದಿಂದ ಫೈಜಲ್ ಅವರನ್ನು ಲೋಕಸಭಾ ಸದಸ್ಯತ್ವ ಅನರ್ಹಗೊಳಿಸಲಾಗಿದೆ ಎಂದು ಉಲ್ಲೇಖ ಮಾಡಿದೆ.
ಲಕ್ಷದ್ವೀಪದ ಸೆಷನ್ಸ್ ನ್ಯಾಯಾಲಯ, 2009ರ ಕೊಲೆ ಯತ್ನ ಪ್ರಕರಣದಲ್ಲಿ ಫೈಜಲ್ ಸೇರಿದಂತೆ ನಾಲ್ವರು ಅಪರಾಧಿಗಳಿಗೆ 10 ವರ್ಷ ಜೈಲು ಮತ್ತು ತಲಾ ಒಂದು ಲಕ್ಷ ದಂಡ ವಿಧಿಸಿತ್ತು.
2009ರಲ್ಲಿ ಲೋಕಸಭೆ ಚುನಾವಣೆ ವೇಳೆ ಕಾಂಗ್ರೆಸ್ ಮುಖಂಡ, ಮಾಜಿ ಕೇಂದ್ರ ಸಚಿವ ಪಿ.ಎಂ. ಸಯೀದ್ ಅವರ ಅಳಿಯ ಮೊಹಮ್ಮದ್ ಸಾಲಿಹ್ ಅವರ ಕೊಲೆ ಯತ್ನಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಾಗಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.