ಐಜ್ವಾಲ್: ಝೋರಂ ಪೀಪಲ್ಸ್ ಮೂವ್ಮೆಂಟ್ನ (ಝೆಡ್ಪಿಎಂ) ಅಧ್ಯಕ್ಷ ಲಾಲ್ದುಹೋಮಾ ಅವರು ಮಿಜೋರಾಂನ ನೂತನ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಹರಿಬಾಬು ಕಂಭಂಪತಿ ಪ್ರತಿಜ್ಞಾವಿಧಿ ಬೋಧಿಸಿದರು.
ಈ ವೇಳೆ 11 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
40 ಸದಸ್ಯ ಬಲದ ಮಿಜೋರಾಂನಲ್ಲಿ ಝೆಡ್ಪಿಎಂ ಪಕ್ಷ 27 ಸ್ಥಾನಗಳನ್ನು ಗೆದ್ದುಕೊಳ್ಳುವ ಮೂಲಕ ಬಹುಮತ ಸಾಧಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.